ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಬಿರಾದಾರ

ಬೈಲಹೊಂಗಲ ೧೫: ಸ್ವಾಮಿ ವಿವೇಕಾನಂದರು ದೇಶ ಕಂಡ ಒಬ್ಬ ಮಹಾನ್ ಸಂತರಾಗಿದ್ದು ಅವರ ಆದರ್ಶ ತತ್ವಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ರಾಷ್ಟçದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಖಾಸ್ಗತೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾಶೀನಾಥ ಬಿರಾದಾರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಂಸ್ಥೆಯ ನೇತಾಜಿ ಸುಭಾಸ ಚಂದ್ರ ಬೋಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಜರುಗಿದ ಸ್ವಾಮಿ ವಿವೇಕಾನಂದ ಅವರ ೧೫೮ ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಹಾಗೂ ಅವರು ಬದುಕಿದ ರೀತಿ ಇತರರಿಗೆ ಮಾದರಿಯಾಗಿದೆ. ಇಂದಿನ ಯುವಕರು ವಿವೇಕಾನಂದರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಶಿಕ್ಷಣವಂತರಾಗಿ ಸಮಾಜದಲ್ಲಿ ಉತ್ತಮ ನಾಗರಿಕರಾಗಬೇಕೆಂದು ನುಡಿದರು.
ಶಿಕ್ಷಕರಾದ ಎಸ್.ಎಸ್.ಕರಿಸಿರಿ, ಸಂತೋಷ ಬೀಡಿ, ಪ್ರಕಾಶ ಕಂಠಿ, ಜಿ.ಎಮ್.ಗಾಡದ, ರೂಪಾ ಹೊಸುರ, ಎಸ್.ವಾಯ್.ಕರಡಿಗುದ್ದಿ, ಎಮ್.ಎನ್.ನದಾಫ ಅವರು ಸ್ವಾಮಿ ವಿವೇಕಾನಂದರ ಜೀವನ ಕುರಿತು ಮಾತನಾಡಿದರು. ಇದಕ್ಕೂ ಮುನ್ನ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಸಮಾರಂಭದಲ್ಲಿ ಇದ್ದರು.