Koppal

ವೇಮನ ಜಯಂತಿ ಕಾರ್ಯಕ್ರಮಕ್ಕೆ ನೌಕರರ ಹಾಜರಿ ಕಡ್ಡಾಯ : ಎಂ.ಪಿ.ಮಾರುತಿ


ಕೊಪ್ಪಳ ಜ.15: ಜಿಲ್ಲಾಡಳಿತದಿಂದ ಜ.19 ರಂದು ಆಚರಿಸಲಾಗುತ್ತಿರುವ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply