vijayapur

ಜ.೧೭ ರಂದು ಬಬಲೇಶ್ವರದಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿರ್ಧಾರ


ವಿಜಯಪುರ ಜ.೧೬: ಜಿಲ್ಲೆಯ ಬಬಲೇಶ್ವರ ತಾಲೂಕಿಗೆ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ ನೂತನ ಸದಸ್ಯರುಗಳ ಉಪಸ್ಥಿತಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರುಗಳ ಹುದ್ದೆಗಳ ಮೀಸಲಾತಿ ನಿರ್ಧರಿಸಲು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ : ೧೭-೦೧-೨೦೨೧ ರಂದು ಮಧ್ಯಾಹ್ನ ೩-೦೦ ಗಂಟೆಗೆ ಶೇಗುಣಸಿ ಗ್ರಾಮದ ಹತ್ತಿರವಿರುವ ಹರಳಯ್ಯನ ಗುಂಡ ಸಮುದಾಯ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿರುತ್ತದೆ ಎಂದು ಬಬಲೇಶ್ವರ ತಹಶೀಲ್ದಾರ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ತಾಲೂಕಿನ ಗ್ರಾಮ ಪಂಚಾಯತಿಯ ಎಲ್ಲ ನೂತನ ಸದಸ್ಯರುಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಅವರು ಪ್ರಕಟಣೆಯ ಮೂಲಕ ಕೋರಿದ್ದಾರೆ.


Leave a Reply