Koppal

ಕೋವಿಡ್-19 ವ್ಯಾಕ್ಸಿನೇಶನ್ ಮೊದಲ ಹಂತದ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ


ಕೊಪ್ಪಳ ಜ.16: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಕೊಪ್ಪಳ ಕಿಮ್ಸ್ ವತಿಯಿಂದ ಕೋವಿಡ್-19 ವ್ಯಾಕ್ಸಿನೇಶನ್ ಲಸಿಕಾ ಕಾರ್ಯಕ್ರಮಕ್ಕೆ ಶನಿವಾರದಂದು(ಜ.16) ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದ್ದು, ಮೊದಲನೇ ಹಂತದಲ್ಲಿ ಜಿಲ್ಲೆಯಲ್ಲಿ ಲಸಿಕೆ ಪಡೆದ ಮೊದಲ ವ್ಯಕ್ತಿ ಕಿಮ್ಸ್ ಸಿಬ್ಬಂದಿ ಬಸವರಾಜ ಬಿ.ಎಲ್. ಆಗಿದ್ದಾರೆ.
ಮೊದಲನೇ ಹಂತದಲ್ಲಿ ಜಿಲ್ಲಾ ಬೋಧಕ ಆಸ್ಪತ್ರೆಯ ಡಿ-ಗ್ರೂಪ್ ನೌಕರ ಬಸವರಾಜ ಬಿ.ಎಲ್. ಎಂಬುವವರಿಗೆ ಕೊಪ್ಪಳ ಜಿಲ್ಲೆಯಲ್ಲಿ ಮೊದಲ ಕೋವಿಡ್-19 ಲಸಿಕೆಯನ್ನು ನೀಡಲಾಯಿತು. ಲಸಿಕೆ ನೀಡುವ ಸಂದರ್ಭದಲ್ಲಿ ಇವರಿಗೆ ಸಂಸದ ಕರಡಿ ಸಂಗಣ್ಣ ಜೊತೆ ಇದ್ದು, ಧೈರ್ಯ ತುಂಬಿದರು. ಬಳಿಕೆ ಪುಷ್ಪ ನೀಡಿ, ಅಭಿನಂದನೆ ಸಲ್ಲಿಸಿದರು.
ಲಸಿಕೆ ನೀಡಿದ ಬಳಿಕ ಬಸವರಾಜ ಬಿ.ಎಲ್ ಅವರಿಗೆ ಥರ್ಮಲ್ ಸ್ಕಾö್ಯನಿಂಗ್ ಹಾಗೂ ರಕ್ತದೊತ್ತಡ ಪರೀಕ್ಷೆ ಮಾಡಿ, ಕೆಲ ಕಾಲ ನಿಘಾ ವಹಿಸಲಾಯಿತು. ನಂತರ ಜಿಲ್ಲಾ ಬೋಧಕ ಆಸ್ಪತ್ರೆಯ ಇನ್ನೋರ್ವ ಸಿಬ್ಬಂದಿ ಆಶಾಬಿ, ನರ್ಸಿಂಗ್ ಆಫೀಸರ್‌ಗಳಾದ ಬಾಳಜ್ಜು ಹಾಗೂ ದೀಪಾ ಸೋಂಪುರ, ಸಮುದಾಯ ವೈದ್ಯಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶರಣಕುಮಾರ ಹೊಳಿಯಾಚಿ, ದಂತ ವೈದ್ಯಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀನಿವಾಸ ಅವರಿಗೆ ಕೋವಿಡ್ ಲಸಿಕೆ ನೀಡುವುದರೊಂದಿಗೆ “ಕೋವಿಡ್-19 ವ್ಯಾಕ್ಸಿನೇಶನ್ ಲಸಿಕಾ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪ್ರಧಾನಿ ಕಾರ್ಯಕ್ರಮ ವೀಕ್ಷಣೆ:
ಕಾರ್ಯಕ್ರಮಕ್ಕೂ ಮುನ್ನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರು ಚಾಲನೆ ನೀಡಿದ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನೇರವಾಗಿ ವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಜಿ.ಪಂ. ಉಪಾಧ್ಯಕ್ಷೆ ಬೀನಾ ಗೌಸ್, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಟಿ., ಜಿಲ್ಲಾ ಶಸ್ತçಚಿಕಿತ್ಸಕ ಡಾ. ಎಸ್.ಬಿ.ದಾನರೆಡ್ಡಿ, ಕೊಪ್ಪಳ ಕಿಮ್ಸ್ ನಿರ್ದೇಶಕ ವಿಜಯನಾಥ ಪಾಟೀಲ್ ಇಟಗಿ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.


Leave a Reply