Ballary

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಅರ್ಜಿ ಆಹ್ವಾನ


ಬಳ್ಳಾರಿ.ಜ.16 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ನಡೆಯುವ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸಲು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

18 ರಿಂದ 45 ವರ್ಷ ವಯೋಮಿತಿ ಹೊಂದಿರಬೇಕು. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ವೀರ ಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆಯನ್ನು ಮಾಡಿರಬೇಕು. ಈ ಸಾಧನೆಯು ಸಾರ್ವಜನಿಕರ ಗಮನಕ್ಕೆ ಬಂದಿರಬೇಕು. ಹಾಗೂ ಈ ಸಾಧನೆಯು ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 1 ರಿಂದ ಡಿಸೆಂಬರ್ 31ರ ಒಳಗೆ ಇರಬೇಕು.

ಜಿಲ್ಲೆಯಲ್ಲಿ ಪ್ರಚಲಿತ ವಿದ್ಯಮಾನಗಳಿಂದ ಮಹಿಳಾ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿರುವಂತಹ ಹಾಗೂ ಮಾದ್ಯಮ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡಂತಹ ಮತ್ತು ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸ್ವಯಂಸೇವಾ ಸಂಸ್ಥೆಗಳು ಹಾಗೂ ಇತರೆ 5 ಕ್ಷೇತ್ರಗಳಾದ “ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ” ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಈ ವಿವಿಧ ಕ್ಷೇತ್ರಗಳಲ್ಲದೇ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಪಾಯದಿಂದ ಪಾರು ಮಾಡಿದಂತಹ ಮಹಿಳೆಗೆ “ವೀರಮಹಿಳೆ” ಪ್ರಶಸ್ತಿಯನ್ನು ನೀಡಲು ಉದ್ದೇಶಿಸಲಾಗಿದೆ.

ಭರ್ತಿಮಾಡಿದ ಅರ್ಜಿಗಳನ್ನು ಜ.22ರವರೆಗೆ ವಿಸ್ತರಿಸಲಾಗಿದೆ. ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಸ್.ಪಿ.ಸರ್ಕಲ್, ದೇವಿನಗರ, ಬಳ್ಳಾರಿ ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ನಮೂನೆಗಳನ್ನು ಪಡೆಯಲು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಳ್ಳಾರಿ ಇವರ ಕಛೇರಿಯನ್ನು ಸಂಪರ್ಕಿಸಬಹುದು. ಅಥವಾ ಕಚೇರಿ ದೂ.ಸಂಖ್ಯೆ: 08392-266219 ಎಂದು ಅವರು ಪ್ರಕಟಣೆ ತಿಳಿಸಿದ್ದಾರೆ.


Leave a Reply