Ballary

 ಅತ್ಯಾಚಾರವೆಸಗಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ


ಕೊಪ್ಪಳ ಜ.16  : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಅಪರಾಧಿ ಮೆಹಬೂಬ್ ಸಿಂಧನೂರ ಇತನ ಮೇಲೆ ಆರೋಪ ಸಾಭಿತಾಗಿದ್ದು, ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ ಶಂಕರ ಎಂ ಜಾಲವಾದಿ ಅವರು ಶಿಕ್ಷೆ ವಿಧಿಸಿದ್ದಾರೆ ಎಂದು ಸರ್ಕಾರಿ ಅಭಿಯೋಜಕರಾದ ಗೌರಮ್ಮ ಎಲ್. ದೇಸಾಯಿ ತಿಳಿಸಿದ್ದಾರೆ.
ಈ ಪ್ರಕರಣದ ಆರೋಪಿ ಮೆಹಬೂಬಸಾಬ್ ಸಿಂಧನೂರ ಸಾ: ಕುಷ್ಟಗಿ, ಇತನು ದೂರುದಾರರ ಅಪ್ರಾಪ್ತ ವಯಸ್ಸಿನ ಮಗಳು ತಮ್ಮ ಮನೆಯಲ್ಲಿದ್ದಾಗ ಮದುವೆಯಾಗುವುದಾಗಿ ಪುಸಲಾಯಿಸಿ ಅಪಹರಣ ಮಾಡಿಕೊಂಡು ಬೆಂಗಳೂರಿನ ಚಿಕ್ಕ ಬಾಣಸವಾಡಿಗೆ ಕರೆದುಕೊಂಡು ಹೋಗಿ ಅಲ್ಲಿ ಕಟ್ಟಡ ನಿರ್ಮಾಣದ ಶೆಡ್ಡಿನಲ್ಲಿ ತಂಗಿದ್ದು, ಅಲ್ಲಿ ಆಕೆಗೆ ಅತ್ಯಾಚಾರ ಮಾಡಿರುವ ಆರೋಪವು ತನಿಖೆಯಲ್ಲಿ ಸಾಭಿತಾಗಿದ್ದರಿಂದ ಇತನ ವಿರುದ್ಧ ಕುಷ್ಟಗಿ ಸಿಪಿಐ ಸುರೇಶ ತಳವಾರರವರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಮೆಹಬೂಬಸಾಬ್ ಸಿಂಧನೂರ ಮೇಲಿನ ಆರೋಪಗಳು ಸಾಭೀತಾಗಿವೆ ಎಂದು 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.35,000 ದಂಡ ವಿಧಿಸಿ, ದಂಡದ ಮೊತ್ತದಲ್ಲಿ ರೂ. 20,000ಗಳನ್ನು ಬಾಧಿತ ಬಾಲಕಿಗೆ ನೀಡವಂತೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ ಶಂಕರ ಎಂ ಜಾಲವಾದಿ ಅವರು ತೀರ್ಪು ಹೊರಡಿಸಿರುತ್ತಾರೆ.  ¸ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಗೌರಮ್ಮ ಎಲ್. ದೇಸಾಯಿ ಅವರು ಈ ಪ್ರಕರಣ ನಡೆಸಿ ವಾದ ಮಂಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Leave a Reply