Belagavi

ರೇಣುಕಾ ಯಲ್ಲಮ್ಮಾ ದೇವಸ್ಥಾನಕ್ಕೆ ಜ. ೩೧ ರವರೆಗೆ ಸಾರ್ವಜನಿಕ ಭಕ್ತರ ಪ್ರವೇಶಕ್ಕೆ ನಿರ್ಬಂಧ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ


ಬೆಳಗಾವಿ, ಜ.೧೮: ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡ ಶ್ರೀ ರೇಣುಕಾದೇವಿ ದೇವಸ್ಥಾನದಲ್ಲಿ ಸಾರ್ವಜನಿಕ ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ -೧೯ ಕರೋನಾ ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ಕುರಿತು ಮುಂಜಾಗೃತಾ ಕ್ರಮವಾಗಿ ಜ.೨೮ ರಂದು ಬನದ ಹುಣ್ಣಿಮೆ ಜಾತ್ರೆ ಇರುವುದರಿಂದ ಸಾರ್ವಜನಿಕ ಭಕ್ತಾದಿಗಳ ದರ್ಶನವನ್ನು ಜ.೩೧ ರವರೆಗೆ ನಿಷೇಧಿಸಿ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ.
ಬನದ ಹುಣ್ಣಿಮೆ ಜಾತ್ರೆಯನ್ನು ರದ್ದುಗೊಳಿಸಿದ್ದು, ಜ. ೨೨ ರಿಂದ ಫೆಬ್ರುವರಿ ೦೯ ರವರೆಗೆ ಭಕ್ತಾದಿಗಳು ಬನದ ಹುಣ್ಣಿಮೆ ಜಾತ್ರೆ ಪೂಜಾ ವಿಧಿ ವಿಧಾನವನ್ನು ಮನೆಯಲ್ಲೇ ಆಚರಣೆ ಮಾಡಬೇಕು ಎಂದು ಯಲ್ಲಮ್ಮನಗುಡ್ಡ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Leave a Reply