Koppal

ಮಹಾಯೋಗಿ ವೇಮನ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ


ಕೊಪ್ಪಳ, ಜ.19 : ಮಹಾಯೋಗಿ ವೇಮನ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ವೇಮನರ ಭಾವಚಿತ್ರಕ್ಕೆ ಇಂದು (ಜ.19) ಪುಷ್ಪ ನಮನ ಸಲ್ಲಿಸಲಾಯಿತು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಹಾಯೋಗಿ ವೇಮನರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದAದು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಹಾಯೋಗಿ ವೇಮನರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಸಮಾಜದ ಮುಖಂಡರಾದ ಜಗದೀಶಪ್ಪ ಸಿಂಗನಾಳ, ಪ್ರಭು ಹೆಬ್ಬಾಳ, ಕಾಶೀನಾಥರೆಡ್ಡಿ, ಹೇಮರೆಡ್ಡಿ ಬಿಕನಳ್ಳಿ, ಡಾ. ಶ್ರೀನಿವಾಸ್, ಮಹೇಂದ್ರಗೌಡ ಮೈನಳ್ಳಿ, ಹೇಮರೆಡ್ಡಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Leave a Reply