Koppal

ಜನವರಿ. ೨೨ ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ


ಕೊಪ್ಪಳ ಜ.೧೯ : ಕೊಪ್ಪಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಜನವರಿ. ೨೨ ರಂದು ಮಧ್ಯಾಹ್ನ ೦೨-೩೦ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಸಂಸದ ಕರಡಿ ಸಂಗಣ್ಣ ಅವರು ವಹಿಸುವರು. ಸಭೆಯಲ್ಲಿ ೨೦೨೦-೨೧ನೇ ಸಾಲಿನ ೩ನೇ ತ್ರೆöÊಮಾಸಿಕದ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಯಲಿದ್ದು, ಸಭೆಗೆ ಸಂಬAಧಪಟ್ಟ ಅಧಿಕಾರಿಗಳು ಪ್ರತಿನಿಧಿಗಳನ್ನು ಕಳುಹಿಸದೇ ಖುದ್ದಾಗಿ ಹಾಜರಾಗಬೇಕು. ಹಾಗೂ ಸಭೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಹಾಜರಾಗಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply