Koppal

ಆರ್‌ಸೆಟಿ : ತರಬೇತಿಗೆ ಅರ್ಜಿ ಆಹ್ವಾನ


ಕೊಪ್ಪಳ, ಜ.19 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿAದ, ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ಮೋಟಾರ್ ರಿವೈಂಡಿAಗ್ ಮತ್ತು ಪಂಪ್‌ಸೆಟ್ ರಿಪೇರಿ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಮಾರ್ಕ್ಸ್ಕಾರ್ಡ್/ ಟಿ.ಸಿ ಲಗತ್ತಿಸಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಬಿ.ಪಿ.ಎಲ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿದ್ದು, ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಫೆಬ್ರವರಿ.01 ಕೊನೆಯ ದಿನವಾಗಿದೆ. ಫೆ.02 ರಂದು ಬೆಳಿಗ್ಗೆ 10.30 ಗಂಟೆಗೆ ಸಂದರ್ಶನ ನಡೆಯಲಿದ್ದು, ಫೆ.03 ರಿಂದ ತರಬೇತಿ ಆರಂಭಿಸಲಾಗುವುದು.
ಆಸಕ್ತರು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಫೋ: 08539-231038 ಇವರನ್ನು ಸಂಪರ್ಕಿಸಬಹುದು ಎಂದು ಆರ್‌ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply