Belagavi

ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ

ಬೆಳಗಾವಿ ೧೯ : ದಿ ೧೯ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ಅಭಿವೃದ್ದಿ ಪಡಿಸುವ ಹಿತದೃಷ್ಠಿಯಿಂದ ಇಂದು ೦೪ ಕೋಟಿ ರೂ.ಗಳ ವೆಚ್ಚದಲ್ಲಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸಗಟು ತರಕಾರಿ ಮಾರುಕಟ್ಟೆ ಬ್ಲಾಕ್ “ಡಿ” ನಲ್ಲಿ ೩೫ ಅಂಗಡಿಗಳ ನಿರ್ಮಾಣ ಹಾಗೂ ಇವುಗಳಿಗೆ ಹೊಂದಿಕೊAಡAತೆ ಆರ್.ಸಿ.ಸಿ ಗಟಾರು , ಕಾಂಕ್ರೀಟ ರಸ್ತೆ ನಿರ್ಮಿಸುವುದು, ಸಗಟು ತರಕಾರಿ ಮಾರುಕಟ್ಟೆ ಬ್ಲಾಕ “ಎ” ನಲ್ಲಿನ ನೆಲಮಾಳಿಗೆಯಲ್ಲಿ ೧೮ ಮಳಿಗೆಗಳನ್ನು ನಿರ್ಮಿಸುವುದರ ಜೊತೆಗೆ ರೈತ ಭವನ ಕಟ್ಟಡ ಹಾಗೂ ಅತಿಥಿ ಗೃಹದ ನವೀಕರಣದ ಕಾಮಗಾರಿಗಳಿಗೆ ಅಡಿಗಲ್ಲಿ ಪೂಜಾ ಸಮಾರಂಭವನ್ನು ಕೈಗೊಳ್ಳುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆರವರು ರೈತರ ಹಾಗೂ ಎಪಿ.ಎಮ್.ಸಿ ವ್ಯಾಪಾರಿಗಳ ಹಿತದೃಷ್ಠಿಯಿಂದ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಅಭಿವೃದ್ದಿ ಪಡಿಸಲಾಗುತ್ತಿದೆ. ಕಾಮಗಾರಿಗಳು ಪೂರ್ಣಗೊಂಡ ನಂತರ ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ಎಪಿಎಮ್‌ಸಿ ಅಧ್ಯಕ್ಷ ಯುವರಾಜ ಕದಮ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಅರುಣ ಕಟಾಂಬಳೆ, ಎಪಿಎಮ್‌ಸಿ ಸದಸ್ಯರುಗಳಾದ ಸುಧೀರ ಗಡ್ಡೆ, ಸಂಜು ಮಾದರ, ಆನಂದ ಪಾಟೀಲ, ಮನೋಜ ಮತ್ತಿಕೊಪ್ಪ, ಆರ್. ಕೆ. ಪಾಟೀಲ, ಲಗಮಣ್ಣ ನಾಯ್ಕ, ಪಡಿಗೌಡ ಪಾಟೀಲ, ಮಹೇಶ ಗೋವೆಕರ, ಮಹೇಶ ಗುಬ್ಬಿ, ನಿಂಗಪ್ಪ ಬಸ್ಸಾಪೂರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker