Belagavi

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ


ಹುಕ್ಕೇರಿ: ಧ್ವನಿ ಫೌಂಡೇಶನ್, ಬೆಂಗಳೂರು ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ, ಬೆಳಗಾವಿ ಇವರುಗಳ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಓದುತ್ತಿರುವ 20 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಕಾರ್ಯಕ್ರಮವನ್ನು ನಿಡಸೋಸಿಯ ಜಗದ್ಗುರು ದುರದುಂಡೀಶ್ವರ ಸಿದ್ಧಸಂಸ್ಥಾನಮಠದಲ್ಲಿ ಬುಧವಾರ ದಿನಾಂಕ 20 ರಂದು ಮದ್ಯಾಹ್ನ 2.00 ಕ್ಕೆ ಆಯೋಜಿಸಲಾಗಿದೆ ಕಾರ್ಯಕ್ರಮದ ಸಾನಿಧ್ಯವನ್ನು ಪರಮ ಪೂಜ್ಯ ಶ್ರೀಮನ್ನಿರಂಜನ ಜಗದ್ಗುರು ಪಂಚಮ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಗಳು ನಿಡಸೋಸಿ ವಹಿಸಲಿದ್ದು, ಅತಿಥಿಗಳಾಗಿ ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಜಾನನ ಮಣ್ಣಿಕೇರಿ, ಹುಕ್ಕೇರಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ ದಂಡಿನ, ಬೆಳಗಾವಿಯ ಕೆ.ಎಲ್.ಇ ವಿಶ್ವವಿದ್ಯಾಲಯ, ಶ್ರೀ ಬಿ.ಎಂ.ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ: ಮಹಾಂತೇಶ ರಾಮಣ್ಣವರ ಆಗಮಿಸಲಿದ್ದಾರೆಂದು ಶ್ರೀಮತಿ ವೈಜಯಂತಿ ಚೌಗಲಾ ಗೌರವ ಕಾರ್ಯದರ್ಶಿ, ಮಹಿಳಾ ಕಲ್ಯಾಣ ಸಂಸ್ಥೆ,ಬೆಳಗಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply