Koppal

ಸರ್ಕಾರಿ ನೌಕರರ ಕ್ರೀಡಾಕೂಟ: ಜ.೨೧ ರಂದು ಪೂರ್ವಭಾವಿ ಸಭೆ


ಕೊಪ್ಪಳ, ಜ.೨೦: ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆ ವತಿಯಿಂದ ೨೦೨೦-೨೧ ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಕುರಿತು ಜ.೨೧ ರಂದು (ಗುರುವಾರ) ಸಾಯಂಕಾಲ ೫ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಜಿಲ್ಲಾ ಕ್ರೀಡಾಂಗಣ ಸಮಿತಿಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸುವರು. ಆದ್ದರಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply