vijayapur

ಜಿಲ್ಲೆಯಲ್ಲಿ ಗಣರಾಜೋತ್ಸವ ಹಿನ್ನೆಲೆ : ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್


ವಿಜಯಪುರ : ಜ.೨೦ : ಜಿಲ್ಲೆಯಲ್ಲಿ ಪ್ರತಿ ವರ್ಷವು ಗಣರಾಜ್ಯೋತ್ಸವ ಆಚರಣೆಯನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ ಕ್ರೀಂಡಾಗಣದಲ್ಲಿ ಆಚರಿಸಲಾಗುತ್ತಿದ್ದು, ಸದ್ಯ ಡಾ. ಬಿ.ಆರ್. ಅಂಬೇಡ್ಕರ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರಾö್ಯಕ್ ಮಾಡಿರುವುದರಿಂದ ಯಾವುದೇ ತರಹದ ಸಾರ್ವಜನಿಕ ಸಮಾರಂಭ ಹಾಗೂ ಈ ವರ್ಷದ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲು ಸಾಧ್ಯವಾಗುವುದಿಲ್ಲ. ಗಣರಾಜ್ಯೋತ್ಸವ ದಿನಾಚರಣೆಯನ್ನು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಜ್ಞಾನಶಕ್ತಿ, ತೊರವಿ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ದಿನಾಂಕ : ೨೬-೦೧-೨೦೨೧ ರಂದು ನಗರದಲ್ಲಿ ಗಣರಾಜೋತ್ಸವ ದಿನಾಚರಣೆ ಆಚರಿಸುವ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ನಡೆದ ಅವರು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕ್ರೀಡಾಂಗಣದಲ್ಲಿ ಅಂದು ಬೆಳಗ್ಗೆ ೯;೦೦ ಗಂಟೆಗೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಗುವುದು. ಧ್ವಜಾರೋಹಣ ಕಾರ್ಯಕ್ರಮದ ವೇದಿಕೆ ನಿರ್ಮಾಣ, ಆಸನಗಳ ವ್ಯವಸ್ಥೆ, ಹಾಗೂ ಪೂರಕವಾಗಿ ಅಗತ್ಯವಿರುವ ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಇಲಾಖೆಗಳಿಗೆ ಸೂಚಿಸಿದರು.ಅದರಂತೆ ಹಿರಿಯ ನಾಗರಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗುವುದು. ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ವೇದಿಕೆ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಸಂದೇಶ ಆದ ನಂತರ ಸಂವಿಧಾನದ ಪ್ರಸ್ತಾವನೆಯನ್ನು ಓದಿ ಹೇಳಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಸಂದೇಶವನ್ನು ಗಣ್ಯವ್ಯಕ್ತಿಗಳಿಗೆ ಹಾಗೂ ಸಾರ್ವಜನಿಕರಿಗೆ ತಿಳಿಸುವುದು ಹಾಗೂ ಭಾರತ ಸಂವಿಧಾನದ ಪ್ರಸ್ತಾವನೆಯ ಫಲಕಗಳನ್ನು (ಬ್ಯಾನರ್/ಪ್ಲೆಕ್ಸ್) ವಿಜಯಪುರ ನಗರದ ಈ ಪ್ರಮುಖ ಸ್ಥಳಗಳಲ್ಲಿ ಅಳವಡಿಸಬೇಕು. ಧ್ವಜಾರೋಹಣ ಮಾಡಲು ಮಾನ್ಯ ಜಿಲ್ಲಾಧಿಕಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು. ಧ್ವಜಸ್ತಂಭವನ್ನು ಸಜ್ಜುಗೊಳಿಸುವ ರಾಷ್ಟ್ರಧ್ವಜವನ್ನು ಗೌರವಯುತವಾಗಿ ಸಚಿವರಿಂದ ಆರೋಹಣ ಹಾಗೂ ಶಿಸ್ತಿನ ಪಥಸಂಚಲನವನ್ನು ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆಗೆ ಸೂಚಿಸಲಾಯಿತು.
ಗಣರಾಜ್ಯೋತ್ಸವಕ್ಕೆ ಸಿಸ್ಟರ್ ಸೇರಿದಂತೆ ಪತ್ರಿಕೆ ಮುದ್ರಿಸಿ ಗಣ್ಯರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬರುವುದು. ಹಾಗೂ ಕೊಡುವ ಜವಾಬ್ದಾರಿಯನ್ನು ಹಾಗೂ ಶಿಷ್ಟಾಚಾರ ಹಾಗೂ ಶಿಷ್ಟಾಚಾರದಂತೆ ವೇದಿಕೆ ನಿರೂಪಣೆ ಮತ್ತು ಕ್ರೀಡಾಂಗಣ ಕಾರ್ಯಕ್ರಮಗಳನ್ನು ನಡೆಸುವ ಜವಾಬ್ದಾರಿಯನ್ನು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ಕ್ರೀಡಾಂಗಣಕ್ಕೆ ಬರುವ ಎಲ್ಲಾ ಆಹ್ವಾನಿತರಿಗೆ ಗಣ್ಯವ್ಯಕ್ತಿಗಳಿಗೆ, ನಾಗರಿಕರಿಗೆ ಮತ್ತು ಪತ್ರಕರ್ತರಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಲು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಹಾಗೂ ಬಾಳೆಹಣ್ಣು ಮತ್ತು ಬಿಸ್ಕೆಟ್ ವ್ಯವಸ್ಥೆ ಮಾಡುವಂತೆ ಅವರು ಸೂಚಿಸಿದರು.
ವಿಜಯಪುರ ನಗರದ ಎಲ್ಲಾ ಮುಖ್ಯ ವೃತ್ತಗಳಿಗೆ ವಿದ್ಯುತ್ ದೀಪಗಳಿಂದ ಶೃಂಗರಿಸಲು ಹಾಗೂ ಸರ್ಕಾರಿ ಕಚೇರಿ, ವಿಶ್ವವಿದ್ಯಾಲಯ ಸ್ವಚ್ಛತೆಯನ್ನು ಕೈಗೊಳ್ಳಲು ಆಯುಕ್ತರು ಮಹಾನಗರ ಪಾಲಿಕೆ ವಿಜಯಪುರ ಹಾಗೂ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.
ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಗತ್ಯವಿರುವ ವೈದ್ಯಕೀಯ ಸಿಬ್ಬಂದಿ ಮತ್ತು ಅಂಬುಲೆನ್ಸ್ ವ್ಯವಸ್ಥೆ ಮಾಡುವುದು ಆವರಣದಲ್ಲಿ ಪ್ರವೇಶಿಸಲು ವ್ಯಕ್ತಿಗಳಿಗೆ ಸ್ಕ್ರೀನಿಂಗ್ ಕೈಗಳಿಗೆ ಸ್ಯಾನೀಟೈಜ್ ಮಾಡಲು ಸೂಚಿಸಿದರು.
ಗಣರಾಜ್ಯೋತ್ಸವ ದಿನದಂದು ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಕಾಲಕ್ಕೆ ರಾಷ್ಟ್ರಧ್ವಜ ಆರೋಹಣ ಹಾಗೂ ಅವರೋಹಣ ಮಾಡುವ ಸಮಯದಲ್ಲಿ ಭಾರತದ ಧ್ವಜ ಸಂಹಿತೆ ಉಲ್ಲಂಘನೆಯಾಗದAತೆ ಅವಶ್ಯಕ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply