vijayapur

ಜ.೨೯,೩೦ ರಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ


ವಿಜಯಪುರ : ಜ.೨೦ : ೨೦೨೦-೨೧ ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ದಿನಾಂಕ : ೨೯-೦೧-೨೦೨೧ ರಂದು ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಹತ್ತಿರದ ಜಿಲ್ಲಾ ಆಡಳಿತ ಭವನದ ಮೈದಾನದಲ್ಲಿ ಹಾಗೂ ಜ.೩೦ ರಂದು ಸಾಂಸ್ಕೃತಿಕ ಸ್ಫರ್ಧೆಗಳನ್ನು ಜಿಲ್ಲಾ ಕ್ರೀಡಾಂಗಣದ ಸಭಾ ಭವನದಲ್ಲಿ ಸಂಘಟಿಸಲು ತೀರ್ಮಾನಿಸಲಾಗಿದೆ ಎಂದು ವಿಜಯಪುರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕ್ರೀಡಾಕೂಟದಲ್ಲಿ ೪೦,೪೫ ವರ್ಷ ಮೇಲ್ಪಟ್ಟ ಹಾಗೂ ಒಳಗಿನ ವಯೋಮಾನದ ಪುರುಷ ಹಾಗೂ ಮಹಿಳೆಯರಿಗೆ ವಿವಿಧ ಸ್ಫರ್ಧೆಗಳನ್ನು ಏರ್ಪಡಿಸಲಾಗಿದ್ದು, ಆಸಕ್ತರು ದಿನಾಂಕ : ೨೫-೦೧-೨೦೨೧ ರೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು, ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣ, ವಿಜಯಪುರ ಇವರಲ್ಲಿ ಹೆಸರು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು, ದೂ.ಸಂ : ೦೮೩೫೨-೨೫೧೦೮೫/೯೪೮೦೮೮೬೫೫೫ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply