Koppal

ಗುಮಗೇರಾ ಗ್ರಾಮ ಪಂಚಾಯಿತಿ ವತಿಯಿಂದ ಮಕ್ಕಳ ಹಕ್ಕುಗಳ ಗ್ರಾಮ ಸಭೆ


ಕುಷ್ಟಗಿ ; ತಾಲೂಕಿನ ಗುಮಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಾಳ ಗ್ರಾಮದಲ್ಲಿ ಮಕ್ಕಳ ಹಕ್ಕುಗಳ ಕುರಿತು ವಿಶೇಷ ಗ್ರಾಮ ಸಭೆ ನಡೆಯಿತು.ಮಕ್ಕಳಿಗಾಗಿ ಇರುವ ಸರ್ಕಾರದ ಯೋಜನೆಗಳ ಬಗ್ಗೆ ಕುಲಂಕುಶವಾಗಿ ಈ ಸಭೆಯಲ್ಲಿ ಚರ್ಚಿಸಲಾಯಿತು. ಮಕ್ಕಳಿಗಾಗಿ ಇರುವಂತಹ ಸೌಲತ್ತುಗಳನ್ನು ಯಾವ ರೀತಿ ಉಪಯೋಗ ಮಾಡಿಕೊಳ್ಳಬೇಕು ಯಾರ ಮೂಲಕ ಮಾಡಿಸಿಕೊಳ್ಳಬೇಕು, ಎಂದು ಹೀಗೆ ಹತ್ತು ಹಲವು ವಿಚಾರಗಳ ಬಗ್ಗೆ ಮಕ್ಕಳ ಹಕ್ಕುಗಳ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಆಡಳಿತ ಅಧಿಕಾರಿ ನೀಲಪ್ಪ ಶೆಟ್ಟಿ ತಿಳಿಸಿದರು.

ಪೊಲೀಸ್ ಇಲಾಖೆಯ ವತಿಯಿಂದ ಶ್ರೀಮತಿ ಮುತ್ತಮ್ಮ ರವರು ಮಾತನಾಡಿ ಗ್ರಾಮದ ಅಭಿವೃದ್ಧಿ ಗ್ರಾಮಗಳ ಅಭಿವೃದ್ಧಿಯ ಜೊತೆಗೆ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿಯನ್ನಾಗಿ ಸಲು, ಹಾಗೂ ಉತ್ತಮ ಸಮಾಜವನ್ನು ನಿರ್ಮಾಣ ಮಾಡುವುದರ ಜೊತೆಗೆ ಎಲ್ಲರೂ ಶಿಕ್ಷಣವಂತ ರಾಗಬೇಕು, ಈಗಾಗಲೇ ಮಕ್ಕಳ ಸಂರಕ್ಷಣೆಗೆ ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ, ಸರ್ಕಾರದ ಯೋಜನೆಗಳನ್ನು ಯಾವ ರೀತಿ ರೀತಿ ಉಪಯೋಗಿಸಿಕೊಳ್ಳಬೇಕು, ಪೊಲೀಸ್ ಇಲಾಖೆಯಿಂದ ಇರುವ ಕಾನೂನುಗಳ ಬಗ್ಗೆ ಹಲವಾರು ಕಾನೂನುಗಳ ಮಕ್ಕಳ ಹಕ್ಕು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸಣ್ಣ ನಂದಿಹಾಳ ನಿರೂಪಣೆ ಮಾಡಿದರು. ಜೊತೆಗೆ ಗ್ರಾಮ ಪಂಚಾಯಿತಿಯಿಂದ ಮಕ್ಕಳಿಗೆ ನೀಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡುವುದಾಗಿ ಸಭೆಯಲ್ಲಿ ತಿಳಿಸಿದರು. ಈ ಗ್ರಾಮಸಭೆಯಲ್ಲಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಪೊಲೀಸ್ ಇಲಾಖೆ, ತಾಲೂಕು ಶಿಶು ಅಭಿವೃದ್ಧಿ ಅಭಿವೃದ್ಧಿ ಕೇಂದ್ರ, ಅಧಿಕಾರಿಗಳು, ಶಾಲಾ ಮಕ್ಕಳು ಹಾಗೂ ಗಂಗನಾಳ ಗ್ರಾಮಸ್ಥರು ಭಾಗಿಯಾಗಿದ್ದರು.


Leave a Reply