Belagavi

ಎಫ್‌ಡಿಎ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ


ಬೆಳಗಾವಿ, ಜ. ೨೧: ಸಹಾಯಕ/ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪರೀಕ್ಷಾ (ಜ.೨೪) ರಂದು ನಡೆಯುವ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ಮುಂಜಾಗ್ರತಾ ಕ್ರಮವಾಗಿ ೨೦೦ ಮೀ. ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ನಿಷೇಧಾಜ್ಞೆ ಹೊರಡಿಸಿದ್ದಾರೆ. ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರಿ ತಿರುಗಾಡುವುದನ್ನು, ಪರೀಕ್ಷೇಯಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಾಯ ಮಾಡುವ ಉದ್ದೇಶದಿಂದ ಪರೀಕ್ಷಾ ಕೇಮದ್ರದ ಹತ್ತಿರ ಬರುವುದನ್ನು, ಸಾರ್ವಜನಿಕ ಸಭೆ, ಮೆರವಣಿಗೆ ಮಾಡುವುದನ್ನು ನಿಷೇಧಿಸಿದ್ದಾರೆ.
ಆಯುಧ, ಮಾರಕಾಸ್ತç, ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ತಿರುಗಾಡುವುದನ್ನು, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು, ಸರ್ಕಾರಿ ಬಸ್ಸು ಹಾಗೂ ಇತರೆ ವಾಹನಗಳಿಗೆ ಅಡೆತಡೆ ಉಂಟುಮಾಡುವುದನ್ನು, ಪರೀಕ್ಷಾ ಕೇಂದ್ರಗಳ ೨೦೦ ಮೀ. ಒಳಗಿನ ಝೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡಲಾಗುತ್ತದೆ.
ವಿದ್ಯಾರ್ಥಿಗಳು, ಸಿಬ್ಬಂದಿಗಳು, ಸರ್ಕಾರದಿಂದ ನೇಮಿಸಿದ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಆರಕ್ಷಕ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದವರಿಗೆ ಶಾಲಾ ಆವರಣದಲ್ಲಿ ಪ್ರವೇಶವನ್ನು ನಿರ್ಬಂಧಿಸಿದೆ.
ಈ ವಿಷಯವಾಗಿ ಮುಂದಿನ ಸೂಕ್ತ ಕ್ರಮವನ್ನು ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.


Leave a Reply