Koppal

ಕೃಷಿ ಆಧಾರಿತ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ


ಕೊಪ್ಪಳ, ಜ.೨೨ : ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿ ಕೆನಾರ ಬ್ಯಾಂಕಿನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿ.ಪಿ.ಎಲ್. ಕುಟುಂಬದ ೧೮ ರಿಂದ ೪೫ ವಯಸ್ಸಿನ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಕೃಷಿ ಆಧಾರಿತ ತರಬೇತಿಗಳನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿಗೆ ಪೂರಕವಾದ ೧೦ ದಿನಗಳ ರೇಷ್ಮೆ ಕೃಷಿ, ೧೦ ದಿನಗಳ ಕೋಳಿ ಸಾಕಾಣಿಕೆ ಹಾಗೂ ೧೩ ದಿನಗಳ ಕೃಷಿ ಉದ್ಯಮಿ ತರಬೇತಿಗಳನ್ನು ನೀಡಲಾಗುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿರುತ್ತದೆ. ಗ್ರಾಮೀಣ ಭಾಗದ ಬಿ.ಪಿ.ಎಲ್ ಕುಟುಂಬದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ಬರಬೇಕು
ತರಬೇತಿಯಲ್ಲಿ ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿAಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಉದ್ಯಮಶೀಲತಾ ಅಭಿವೃದ್ಧಿಯ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೆನಾರ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕ್ನನಡ ಜಿಲ್ಲೆ ವಿಳಾಸಕ್ಕೆ ಅಥವಾ ದೂ.ಸಂ: ೦೮೨೮೪-೨೯೫೩೦೭, ಮೊ.ಸಂ.೯೪೮೩೪೮೫೪೮೯, ೯೪೮೨೧೮೮೭೮೦, ೮೧೯೭೦೨೨೫೦೧ ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply