Gadag

24 ರಂದು ಕಪ್ಪತ ಉತ್ಸವ 2021


ಗದಗ  22 :  ಗದಗ ಅರಣ್ಯ  ಇಲಾಖೆಯಿಂದ  ಕಪ್ಪತ ಉತ್ಸವವನ್ನು ಜನೆವರಿ 24 ರಂದು ಬೆ 10 ಗಂಟೆಗೆ ನಗರದ  ರಿಂಗ್ ರೋಡ್‍ನಲ್ಲಿಯ  ಡಾ. ಅಂಬೇಡ್ಕರ್ ಭವನದಲ್ಲಿ ಜರುಗಲಿದೆ.  ರಾಜ್ಯದ ಸಣ್ಣ ಕೈಗಾರಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಘನ ಉಪಸ್ಥಿತಿ ವಹಿಸುವರು.  ಅರಣ್ಯ ಇಲಾಖೆಯ ಸಚಿವ ಅರವಿಂದ ಲಿಂಬಾವಳಿ ಕಾರ್ಯಕ್ರಮ ಉದ್ಘಾಟಿಸುವರು. ಪ್ರವಾಸೋದ್ಯಮ ಮತ್ತು ಪರಿಸರ ಜೀವಿಶಾಸ್ತ್ರ ಇಲಾಖೆಯ ಸಚಿವ ಆನಂದ್ ಸಿಂಗ್ ಪುಸ್ತಕ ಬಿಡುಗಡೆ ಮಾಡುವರು. ಶಾಸಕ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ  ಅಧ್ಯಕ್ಷ ಹಾಗೂ  ರೋಣ ಶಾಸಕ  ಕಳಕಪ್ಪ ಬಂಡಿ, ಜಿ.ಪಂ. ಅಧ್ಯಕ್ಷ ಈರಪ್ಪ ನಾಡಗೌಡ್ರ ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ , ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್ , ಶಿರಹಟ್ಟಿ ಶಾಸಕ ರಾಮಣ್ಣ  ಲಮಾಣಿ , ಜಿ.ಪಂ. ಉಪಾಧ್ಯಕ್ಷೆ  ಶ್ರೀಮತಿ ಮಂಜುಳಾ ಹುಲ್ಲಣ್ಣವರ, ತಾ.ಪಂ. ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ಉಪಾಧ್ಯಕ್ಷ ಶ್ರೀಮತಿ ಮಮತಾಬ್ ಬಿ ನದಾಫ್, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಸಂಗಮೇಶ ದುಂದೂರ  ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರ  ಸಂಜಯ ಮೋಹನ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಾದ  ಅಜಯ ಮಿಶ್ರಾ,  ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕರ್ನಾಟಕ ಮೃಗಾಲಯ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ. ರವಿ, ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ  ಮಂಜುನಾಥ ಚವ್ಹಾಣ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್ ಕೆ,  ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಯತೀಶ್ ಎನ್   ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ, ಸಹಾಯಕ ಅರಣ್ಯ ಸಂರಕ್ಷಣಾದಿಕಾರಿ ಪರಿಮಳ ವಿ.ಎಚ್.  ಸರ್ವರಿಗೂ  ಸ್ವಾಗತ ಕೋರಿದ್ದಾರೆ.


Leave a Reply