Gadag

26 ರಂದು ಗಣರಾಜ್ಯೋತ್ಸವ ದಿನಾಚರಣೆ 2021


ಗದಗ   22 : ಜಿಲ್ಲಾಡಳಿತದಿಂದ  ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಜನೆವರಿ 26 ರಂದು ಬೆ. 9 ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ.
ರಾಜ್ಯದ ಸಣ್ಣ ಕೈಗಾರಿಕೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವರು ಹಾಗೂ    ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಧ್ವಜಾರೋಹಣ ನೆರವೇರಿಸುವರು. ಗದಗ ಶಾಸಕ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಕಳಕಪ್ಪ ಬಂಡಿ , ಜಿ.ಪಂ. ಅಧ್ಯಕ್ಷ ಈರಪ್ಪ ನಾಡಗೌಡ್ರ , ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ , ಬಸವರಾಜ ಹೊರಟ್ಟಿ ,ಶ್ರೀನಿವಾಸ ಮಾನೆ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಶಾಸಕರುಗಳಾದ  ರಾಮಣ್ಣ ಲಮಾಣಿ ,  ಜಿ.ಪಂ. ಉಪಾಧ್ಯಕ್ಷೆ ಶ್ರಿಮತಿ ಮಂಜುಳಾ ಮೋಹನ ಹುಲ್ಲಣ್ಣವರ, ಗದಗ ತಾ.ಪಂ. ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ತಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಮಮತಾಜ್ ಬಿ ಅಲ್ಲಾಸಾಬ ನದಾಫ್ , ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು , ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಯತೀಶ್ ಎನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ ಸರ್ವರಿಗೂ ಸ್ವಾಗತ ಕೋರಿದ್ದಾರೆ.


Leave a Reply