Ballary

ಆಯುಷ್ ನೌಕರರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ‘ತಾರಾನಾಥ ಕಪ್ -2021’ ಜ.23 ಮತ್ತು 24ರಂದು


ಬಳ್ಳಾರಿ,ಜ.22 : ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ಇವರ ಸಂಯುಕ್ತ ಆಶ್ರಯದಲ್ಲಿ ಜ.23ರಂದು ಬೆಳಗ್ಗೆ 9ಕ್ಕೆ ಮಹಾವಿದ್ಯಾಲಯದ ಮೈದಾನದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ‘ಆಯುಷ್’ ನೌಕರರ ‘ತಾರಾನಾಥ ಕಪ್ -2021’ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ರಾಜಶೇಖರ್ ಎಸ್.ಗಾಣಿಗೇರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ ಸಮಾರಂಭವನ್ನು ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಬುಡಾ ಅಧ್ಯಕ್ಷರಾದ ದಮ್ಮೂರು ಶೇಖರ್, ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಮತ್ತು ವಾಣಿಜ್ಯೋದ್ಯಮಿಗಳಾದ ಮರ್ಚೇಡ ಮಲ್ಲಿಕಾರ್ಜುನಗೌಡ ಅವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಸೈಯದ್ ಅತ್ಹರ್ ಫಾತಿಮಾ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಧ್ಯಾಪಕರಾದ ಡಾ.ರಾಜಶೇಖರ್ ಗಾಣಿಗೇರ ಸಂಘಟನಾ ಕಾರ್ಯದರ್ಶಿಗಳಾಗಿ ಭಾಗಿಯಾಗಲಿದ್ದಾರೆ.
ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಚಾರ್ಯರಾದ ಡಾ.ಅಹಲ್ಯಾ ಎಸ್, ಮೈಸೂರಿ ಜಿಲ್ಲೆಯ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಚಾರ್ಯರಾದ ಡಾ.ಗಜಾನನ ಹೆಗಡೆ, ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಚಾರ್ಯರಾದ ಡಾ.ಎಮ್.ಎಸ್.ದೊಡ್ಡಮನಿ, ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಚಾರ್ಯರಾದ ರಾಧಕೃಷ್ಣ ರಾವ್, ಬೆಂಗಳೂರಿನ ಸರ್ಕಾರಿ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಚಾರ್ಯರಾದ ವಿ.ಗುರುಪ್ರಸಾದ, ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಚಾರ್ಯರಾದ ಸಲ್ಮಾ ಬಾನು, ಬೆಂಗಳೂರಿನ ಆಯುಷ್ ಇಲಾಖೆಯ ಆಡಳಿತಾಧಿಕಾರಿಗಳಾದ ಎಂ.ವಿ.ಕುಮಾರ, ಸಹಾಯಕ ಆಡಳಿತಾಧಿಕಾರಿ ಎಂ.ಬಸವರಾಜಯ್ಯ ಹಾಗೂ ಇತರೆ ಗಣ್ಯವ್ಯಕ್ತಿಗಳು ಆಗಮಿಸಲಿದ್ದಾರೆ.


Leave a Reply