BallaryGadagKoppal

ಮಿನಿ ಉದ್ಯೋಗ ಮೇಳ ಜ.25ರಂದು

ಬಳ್ಳಾರಿ,ಜ.22 : ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಇಂಡೋ ಅಮೇರಿಕನ್ ಪದವಿ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಎನ್.ಸಿ.ಎಸ್ ಉದ್ಯೋಗ ಮೇಳವನ್ನು ಇದೇ ಜ.25 ರಂದು ಇಂಡೋ ಅಮೇರಿಕನ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಉದ್ಯದೋಗ ಮೇಳದಲ್ಲಿ ಸುಮಾರು 15 ಕಂಪನಿಗಳು ಭಾಗವಹಿಸಲಿದ್ದಾರೆ. ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ತುಂಬಲಿದ್ದಾರೆ. ಎಸ್ಸೆಸ್ಸೆಲ್ಸಿ ಗಿಂತ ಕಡಿಮೆ, ಎಸ್ಸೆಸ್ಸೆಲಿ ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರಗಳೊಂದಿಗೆ ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ. ಈ ಉದ್ಯೋಗ ಮೇಳವು ಬೆಳಗ್ಗೆ 10ರಿಂದ ಸಂಜೆ 4 ರವರೆಗ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವವರು ಕಡ್ಡಾಯ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂ.ಸಂ.9844444958/08392-273988 ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker