Koppal

ಯುವ ಮತದಾರರು ಮತದಾನದ ಹಕ್ಕಿನ ಕುರಿತು ಜಾಗೃತರಾಗಬೇಕು : ಎಲ್. ವಿಜಯಲಕ್ಷಿö್ಮÃದೇವಿ


ಕೊಪ್ಪಳ, ಜ.೨೫: ದೇಶದ ಮತದಾರರು ಹಾಗೂ ಯುವ ಮತದಾರರಿಗೆ ಮತದಾನದ ಹಕ್ಕಿನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜನವರಿ ೨೫ ರಂದು ರಾಷ್ಟಿçÃಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ ಎಂದು ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಲ್. ವಿಜಯಲಕ್ಷಿö್ಮÃದೇವಿ ಹೇಳಿದರು.
ಸೋಮವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಭಾರತ ಚುನಾವಣಾ ಆಯೋಗ, ಕರ್ನಾಟಕ ಚುನಾವಣಾಧಿಕಾರಿಗಳ ಕಾರ್ಯಾಲಯ ಕೊಪ್ಪಳ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “೧೧ನೇ ರಾಷ್ಟಿçÃಯ ಮತದಾರರ ದಿನಾಚರಣೆ-೨೦೨೧” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟಿçÃಯ ಮತದಾನ ದಿನಾಚರಣೆ ಎಂದರೆ ಚುನಾವಣೆಯ ಜಾಗೃತಿ ಮೂಡಿಸುವುದಾಗಿದೆ. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದ್ದು, ಮತದಾನದಿಂದ ಯಾರೂ ಹೊರಗುಳಿಯಬಾರದು. ಈ ಕುರಿತು ಸಾರ್ವಜನಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಅವರಿಗೆ ಮನವರಿಕೆ ಮಾಡಬೇಕಾಗಿದೆ. ಈ ಕಾರ್ಯಕ್ಕೆ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ. ಮತದಾನ ಎನ್ನುವುದು ನಮ್ಮೆಲ್ಲರ ಸಂವಿಧಾನಿಕವಾದ ಹಕ್ಕಾಗಿದ್ದು, ಮತ ಚಲಾಯಿಸುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದರ ಜೊತೆಗೆ ನಮ್ಮ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆಯಾಗದಂತೆ ನಾವೆಲ್ಲರೂ ನೋಡಿಕೊಳ್ಳಬೇಕು ಎಂದರು.
ಸAವಿಧಾನವು ನಮ್ಮೆಲ್ಲರಿಗೂ ಸಮಾನವಾದ ಹಕ್ಕುಗಳನ್ನು ನೀಡಿದೆ. ಹಾಗಾಗಿ ಅರ್ಹತೆ ಹೊಂದಿರುವ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆಮಾಡಿ ಕಳುಹಿಸುವ ಜವಾಬ್ದಾರಿ ನಮ್ಮದಾಗಬೇಕು. ಮತದಾನ ಎನ್ನುವುದು ನಮ್ಮೆಲ್ಲರ ಹಕ್ಕಾಗಿದ್ದು, ಅದನ್ನು ಸರಿಯಾದ ರೀತಿಯಲ್ಲಿ ಚಲಾಯಿಸಿ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾತನಾಡಿ, ಕಳೆದ ಕೆಲವು ತಿಂಗಳುಗಳ ಹಿಂದೆ ಅಮೇರಿಕಾ ಚುನಾವಣೆ ನೋಡಿದರೆ ನಮ್ಮ ಪ್ರಜಾಪ್ರಭುತ್ವದ ಮಹತ್ವ ಅರ್ಥವಾಗುತ್ತದೆ ಹಾಗೂ ಅದು ಎಷ್ಟು ಬಲಿಷ್ಟವಾಗಿದೆ ಎಂಬುವುದು ತಿಳಿಯುತ್ತದೆ. ನಮ್ಮ ದೇಶದ ಜನರು ಮತದಾರರಾಗಿ, ಮಾಲೀಕರಾಗಿ ಅವರ ಜವಾಬ್ದಾರಿ ತಿಳಿದುಕೊಂಡಿದ್ದಾರೆ. ಹಾಗಾಗಿ ಇತ್ತೀಚೆಗೆ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುತ್ತದೆ ಎಂದರೆ ಮತದಾರರು ಜಾಗೃತರಾಗಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ಮತದಾರ ಪಟ್ಟಿಯ ಪರಿಶೀಲನಾ ಕಾರ್ಯ ನಡೆಯುತ್ತದೆ. ಮತದಾರರ ಪಟ್ಟಿಯಲ್ಲಿ ತಿದ್ದುಪಡಿ, ಯುವ ಮತದಾರರ ಸೇರ್ಪಡೆಗಾಗಿ ಪ್ರತಿ ವರ್ಷ ನಡೆಯುವ ಮತದಾರರ ಪರಿಷ್ಕರಣೆ ಕಾರ್ಯದ ಸಂದರ್ಭದಲ್ಲಿ ಮತದಾರರು ತಮ್ಮ ಹೆಸರುಗಳನ್ನು ಸೇರ್ಪಡೆ, ತಿದ್ದುಪಡಿ ಸೇರಿದಂತೆ ಪರಿಷ್ಕರಣೆಗೆ ಅವಕಾಶವಿರುತ್ತದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಮಾತನಾಡಿ, ಎರಡನೇ ಮಹಾಯುದ್ಧದ ನಂತರ ಪರಕೀಯರ ಆಡಳಿತಕ್ಕೆ ಒಳಗಾದ ತೃತೀಯ ಜಗತ್ತಿನ ದೇಶಗಳಾದ ಭಾರತ, ಆಫ್ರಿಕಾ ಖಂಡದ ಇತರ ದೇಶಗಳು ತಮ್ಮ ಸ್ವ್ವಾಯತ್ತೆಗಾಗಿ ತಮ್ಮದೇ ಆದ ಸಂವಿಧಾನವನ್ನು ರೂಪಿಸಿ ಸ್ವಾತಂತ್ರö್ಯಕ್ಕಾಗಿ ಹೋರಾಡುತ್ತಾ ತಮ್ಮದೇ ಆದ ಪ್ರಜಾಸತ್ತಾತ್ಮಕ ಆಡಳಿತ ವ್ಯವಸ್ಥೆಯನ್ನು ರೂಪಿಸಿಕೊಂಡಿದ್ದು, ಭಾರತವೂ ಇದಕ್ಕೆ ಹೊರತಾಗಿಲ್ಲ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಇಂದು ಬಲಿಷ್ಠವಾಗಿರುವುದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಠಿ ನಮ್ಮ ಇಂದಿನ ಪ್ರಜಾಪ್ರಭುತ್ವವು ವಿಶ್ವಕ್ಕೆ ಮಾದರಿಯಾಗಿದೆ. ಒಂದು ದೇಶದ ಅಳಿವು-ಉಳಿವು ಆ ದೇಶದ ಮತದಾರರ ಮೇಲಿದ್ದು, ಉತ್ತಮ ನಾಯಕರನ್ನು ಆಯ್ಕೆಮಾಡುವುದು ಪ್ರತಿಯೊಬ್ಬ ಮತದಾರರ ಜವಾಬ್ದಾರಿ ಹಾಗೂ ಹಕ್ಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಜಿ.ಪಂ. ಉಪಕಾರ್ಯದರ್ಶಿ ಶರಣಬಸವರಾಜ್, ಯೋಜನಾ ನಿರ್ದೇಶಕ ಟಿ. ಕೃಷ್ಣಮೂರ್ತಿ, ತಹಶೀಲ್ದಾರ್ ಜೆ.ಬಿ. ಮಜ್ಜಿಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಮತದಾರರ ಗುರುತಿನ ಚೀಟಿ ಮಿತರಣೆ;
೧೧ನೇ ರಾಷ್ಟಿçÃಯ ಮತದಾರರ ದಿನಾಚರಣೆ-೨೦೨೧ರ ನಿಮಿತ್ತ ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ನೂತನ ಮತದಾರರಿಗೆ ಮತದಾನ ಗುರುತಿನ ಚೀಟಿ ವಿತರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಲಕ್ಷಿö್ಮÃ, ಕಿರಣ, ಕುಮಾರಸ್ವಾಮಿ, ರವಿಕುಮಾರ, ಸಿಮ್ರಾನ್, ಸ್ಫೂರ್ತಿ ಹಾಗೂ ಮತ್ತಿತರಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಲಾಯಿತು.
ವಿವಿಧ ಸ್ಪರ್ಧೆಗಳಿಗೆ ಪ್ರಶಸ್ತಿ ಮತ್ತು ಬಹುಮಾನ ;
ರಾಷ್ಟಿçÃಯ ಮತದಾರರ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ ಪ್ರೌಢ ಶಾಲೆ, ಪದವಿ ಪೂರ್ವ, ಪದವಿ/ ಸ್ನಾತಕೋತ್ತರ ವಿಭಾಗದಲ್ಲಿ ರಸಪ್ರಶ್ನೆ ಕಾರ್ಯಕ್ರಮ, ಕನ್ನಡ ಮತ್ತು ಇಂಗ್ಲೀಷ ಪ್ರಬಂಧ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣೆ ಮಾಡಲಾಯಿತು. ಚುನಾವಣೆ ಮತ್ತು ಮತದಾನದ ಬಗ್ಗೆ ಮತದಾರರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲು ಸ್ವೀಪ್ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡ ಶಾಲಾ-ಕಾಲೇಜುಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.


Leave a Reply