Gadag

ಯೋಗದಿಂದ ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಶಿಕ್ಷಕರು ಕೈಜೋಡಿಸಿ


ಗದಗ  ೨೭ : ಶಾಲಾ ಮಕ್ಕಳಿಗೆ ದಿನಂಪ್ರತಿ ಯೋಗವನ್ನು ಕಡ್ಡಾಯವಾಗಿ ಶಿಕ್ಷಕರು ಹೇಳಿಕೊಟ್ಟಲ್ಲಿ ಅವರ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸಿ ಮುಂದಿನ ದಿನಗಳಲ್ಲಿ ರೋಗ ರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ಜಿಲ್ಲೆಯ ಎಲ್ಲ ದೈಹಿಕ ಶಿಕ್ಷಕರು ಮನ ಪೂರ್ವಕವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷ ಈರಣ್ಣ ನಾಡಗೌಡ ನುಡಿದರು.
ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದ ಸಭಾಭವನದಲ್ಲಿ ಜರುಗಿದ ರಾಷ್ಟ್ರೀಯ ಆಯುಷ್ ಅಭಿಯಾನ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದೈಹಿಕ ಶಿಕ್ಷಕ ಶಿಕ್ಷಕಿಯರಿಗೆ ನಡೆದ ಯೋಗ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದಂದೂರ, ಜಿ.ಪಂ. ಸದಸ್ಯ ವಾಸಣ್ಣ ಕುರಡಗಿ, ಗದಗ ತಾಲೂಕು ಪಂಚಾಯತ ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ಜಿಲ್ಲಾ ಆಯುಷ ಅಧಿಕಾರಿ ಡಾ.ಸುಜಾತಾ ಪಾಟೀಲ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕ ಬಸವಂತಪ್ಪ, ಯುವಜನ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಶ್ವನಾಥ.ಬಿ.ಜಿ. ಸೇರಿದಂತೆ ದೈಹಿಕ ಶಿಕ್ಷಕರು, ಆಯುಷ ಇಲಾಖೆ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Leave a Reply