vijayapur

ಮಾಜಿ ಸಚಿವರು, ಸಿಂದಗಿ ಶಾಸಕ ಎಮ್.ಸಿ. ಮನಗೂಳಿ ಅವರ ನಿಧನಕ್ಕೆ ಸರ್ಕಾರದಿಂದ ತೀವ್ರ ಸಂತಾಪ


ವಿಜಯಪುರ:ಜ.೨೮: ಮಾಜಿ ಸಚಿವ, ವಿಜಯಪುರ ಜಿಲ್ಲೆಯ ಸಿಂದಗಿ ಶಾಸಕರಾದ ಶ್ರೀ ಎಂ.ಸಿ.ಮನಗೂಳಿ ಅವರ ನಿಧನಕ್ಕೆ ರಾಜ್ಯ ಸರ್ಕಾರವು ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಲು ಸರ್ಕಾರ ಆದೇಶಿಸಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ-೧ ಸಿಆಸುಇ (ರಾಜ್ಯ ಶಿಷ್ಟಾಚಾರ) ಮೊಹಮ್ಮದ ನಯೀಮ್ ಮೊಮಿನ್ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.


Leave a Reply