vijayapur

ಮಾಜಿ ಸಚಿವರು, ಸಿಂದಗಿ ಶಾಸಕ ಎಮ್.ಸಿ. ಮನಗೂಳಿ ಅವರ ನಿಧನಕ್ಕೆ ಡಿಸಿಎಂ ಗೋವಿಂದ ಕಾರಜೋಳ ತೀವ್ರ ಸಂತಾಪ


ವಿಜಯಪುರ:ಜ.೨೮ : ಮಾಜಿ ಸಚಿವ, ವಿಜಯಪುರ ಜಿಲ್ಲೆಯ ಸಿಂದಗಿ ಶಾಸಕರಾದ ಶ್ರೀ ಎಂ.ಸಿ.ಮನಗೂಳಿ ಅವರ ನಿಧನಕ್ಕೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎರಡು ಬಾರಿ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ ಅವರು ಕೃಷಿ ಕುಟುಂಬದಿAದ ಬಂದಿದ್ದು, ಜಿಲ್ಲೆಯ ಕೃಷಿ ಹಾಗೂ ನೀರಾವರಿ ಕ್ಷೇತ್ರದ ಅಭಿವೃದ್ಧಿಗಾಗಿ ಹೋರಾಟ ನಡೆಸುವ ಮೂಲಕ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸಿದ್ದಾರೆ.
ಸರಳ, ಸಜ್ಜನ ರಾಜಕಾರಣಿಯಾಗಿದ್ದರು. ಶ್ರೀ ಮನಗೂಳಿ ಅವರನ್ನು ಸದನದ ಒಳಗೂ ಹಾಗೂ ಹೊರಗಡೆಯೂ ಮಾವ ಎಂದೇ ಸಂಭೋದಿಸುತ್ತಿರುವುದಾಗಿ ತಿಳಿಸಿದ ಡಿಸಿಎಂ, ಅವರೊಂದಿಗೆ ತಾವು ಅವಿನಾಭಾವ ಸಂಬAಧ ಹೊಂದಿದ್ದು, ಅವರ ನಿಧನದಿಂದ ದಿಗ್ಭ್ರಾಂತ ನಾಗಿದ್ದೇನೆ. ಅವರ ನಿಧನದಿಂದ ರಾಜ್ಯವು ಓರ್ವ ಹಿರಿಯ, ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡAತಾಗಿದೆ.
ಭಗವAತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಉಪ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


Leave a Reply