vijayapur

ಮಾಜಿ ಸಚಿವರು, ಸಿಂದಗಿ ಶಾಸಕ ಎಮ್.ಸಿ. ಮನಗೂಳಿ ಅವರ ನಿಧನಕ್ಕೆ ಸಚಿವ ಸಿ.ಸಿ.ಪಾಟೀಲ ತೀವ್ರ ಸಂತಾಪ


ವಿಜಯಪುರ:ಜ.೨೮ : ಮಾಜಿ ಸಚಿವರು, ಸಿಂದಗಿ ವಿಧಾನ ಸಭಾ ಕ್ಷೇತ್ರದ ಶಾಸಕರು, ಹಿರಿಯ ಮುತ್ಸದ್ಧಿ ರಾಜಕಾರಣಿಗಳಾಗಿದ್ದ ದಿವಂಗತ ಎಮ್. ಸಿ. ಮನಗೂಳಿ ಅವರ ನಿಧನಕ್ಕೆ ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವರಾದ ಶ್ರೀ ಸಿ.ಸಿ.ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ದಿವಂಗತರು ಸುರ್ಧೀರ್ಘವಾದ ತಮ್ಮ ರಾಜಕೀಯ ಜೀವನದಲ್ಲಿ ಸಮಾಜಪರ ಕಾರ್ಯಗಳ ಜೊತೆಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ತೋಟಗಾರಿಕಾ ಸಚಿವರು ಮತ್ತು ವಿವಿಧ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಮತ್ತು ಹಿರಿಯ, ಮುತ್ಸದ್ಧಿ ರಾಜಕಾರಣಿಗಳಾಗಿದ್ದ ಅವರು ಎಲ್ಲರೊಂದಿಗೆ ಅತ್ಯಂತ ಸ್ನೇಹಮಯರಾಗಿದ್ದು, ಸರಳ, ಸಜ್ಜನಿಕೆಯ ವ್ಯಕ್ತಿತ್ವಕ್ಕೆ ಹೆಸರುವಾಸಿಯಾಗಿದ್ದರು. ಇವರ ನಿಧನದಿಂದ ಅವರ ಕುಟುಂಬ ವರ್ಗಕ್ಕೆ, ಕ್ಷೇತ್ರದ ಜನತೆಗೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ.
ಇಂತಹ ಅಪರೂಪದ ನಾಯಕರ ಅಗಲಿಕೆಯಿಂದ ಅವರ ಅಭಿಮಾನಿಗಳಿಗೆ, ಕುಟುಂಬ ವರ್ಗದವರಿಗೆ, ಬಂಧು-ಬಳಗದವರಿಗೆ ತೀವ್ರ ಆಘಾತ ಉಂಟುಮಾಡಿದ್ದು, ಭಗವಂತನು ದುಃಖದಲ್ಲಿರುವ ಅವರ ಕುಟುಂಬ ವರ್ಗಕ್ಕೆ ದುಃಖಭರಿಸುವ ಶಕ್ತಿ ನೀಡಲಿ ಮತ್ತು ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲೆಂದು ಪ್ರಾರ್ಥಿಸುವದಾಗಿ ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


Leave a Reply