vijayapur

ಮಾಜಿ ಸಚಿವರು, ಸಿಂದಗಿ ಶಾಸಕ ಎಮ್.ಸಿ. ಮನಗೂಳಿ ಅವರ ನಿಧನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ತೀವ್ರ ಸಂತಾಪ


ವಿಜಯಪುರ:ಜ.೨೮: ಮಾಜಿ ಸಚಿವರು, ಸಿಂದಗಿ ವಿಧಾನ ಸಭಾ ಕ್ಷೇತ್ರದ ಶಾಸಕರು, ಹಿರಿಯ ಮುತ್ಸದ್ಧಿ ರಾಜಕಾರಣಿಗಳಾಗಿದ್ದ ದಿವಂಗತ ಎಮ್. ಸಿ. ಮನಗೂಳಿ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಂಡ ಅತ್ಯಂತ ಶ್ರೇಷ್ಠ ಮುತ್ಸದ್ಧಿ ಹಾಗೂ ಅಜಾತಶತ್ರುವೆಂದೇ ಖ್ಯಾತರಾಗಿದ್ದ ಶ್ರೀ ಮಲ್ಲಪ್ಪ ಚನ್ನವೀರಪ್ಪ ಮನಗೂಳಿ ಅವರ ನಿಧನದಿಂದ ರಾಜಕಾರಣದ ದೃವತಾರೆಯೊಂದು ಅಸ್ತಂಗತವಾದAತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನಲ್ಲಿ ೧೯೩೭ ರಲ್ಲಿ ಜನಿಸಿದ ಶ್ರೀಯುತರದು ಬಹುಮುಖ ವ್ಯಕ್ತಿತ್ವ. ೧೯೯೪ರಲ್ಲಿ ಪ್ರಪ್ರಥಮ ಬಾರಿಗೆ ಸಿಂದಗಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಂತರ ೨೦೧೮ರಲ್ಲಿ ತೋಟಗಾರಿಕೆ ಇಲಾಖಾ ಸಚಿವರಾಗಿ ಹೀಗೆ ವಿವಿಧ ಹುದ್ದೆಗಳಲ್ಲಿ ಹಲವು ದಶಕಗಳಿಂದಲೂ ಹೆಚ್ಚು ಕಾಲ ಸಕ್ರಿಯವಾಗಿದ್ದರು.
ತಮ್ಮ ಸರಳ ವ್ಯಕ್ತಿತ್ವದಿಂದ ಇಡೀ ರಾಜ್ಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು. ಸಿಂದಗಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಜನಮಾನಸದಲ್ಲಿ ಅವರು ಚಿರಸ್ಥಾಯಿಯಾಗಿದ್ದಾರೆ.
ಇಂತಹ ಅಪರೂಪದ ನಾಯಕರ ಅಗಲಿಕೆಯಿಂದ ನಮ್ಮ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಅಪಾರ ಅಭಿಮಾನಿಗಳಿಗೆ, ಕುಟುಂಬದವರಿಗೆ, ಬಂಧು-ಬಾAಧವರಿಗೆ ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


Leave a Reply