ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ನೋಂದಣಿಗೆ ಸೂಚನೆ
ಕೊಪ್ಪಳ, ಜ.೨೯ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಕೊಪ್ಪಳ ವತಿಯಿಂದ ೨೦೨೦-೨೧ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆ.೦೪ ರಿಂದ ೦೬ ರವರೆಗೆ ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲು ನಿರ್ಧರಿಸಲಾಗಿದ್ದು, ಆಸಕ್ತ ನೌಕರರು ಸ್ಪರ್ಧೆಯಲ್ಲಿ ಭಾಗವಹಿಸಲು ಹೆಸರು ನೋಂದಣಿ ಮಾಡಿಕೊಳ್ಳಲು ತಿಳಿಸಿದೆ.
ಪುರುಷ ಹಾಗೂ ಮಹಿಳಾ ಹಾಗೂ ೪೫ ವರ್ಷ ಮೇಲ್ಪಟ್ಟ ಪುರುಷರಿಗಾಗಿ ಮತ್ತು ೪೦ ವರ್ಷ ಮೇಲ್ಪಟ್ಟ ಮಹಿಳೆಯರು ವೆಟಿರಿನ್ ವಿಭಾಗದ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ ಹಾಗೂ ಗುಂಪು ಕ್ರೀಡೆಗಳ ಸ್ಪರ್ಧೆಗಳು ನಡೆಯಲಿವೆ. ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಫೆ.೦೨ ರೊಳಗಾಗಿ ತಮ್ಮ ಕಚೇರಿಯ ಮುಖ್ಯಸ್ಥರ ಪತ್ರದೊಂದಿಗೆ ನೋಂದಣಿ ಮಾಡಿಸತಕ್ಕದ್ದು. ಖಾಯಂ ಮೂಲ ಕೆಜಿಐಡಿ ಸಂಖ್ಯೆ ಹೊಂದಿರುವ ರಾಜ್ಯ ಸರ್ಕಾರಿ ನೌಕರರು ಮಾತ್ರ ಭಾಗವಹಿಸಲು ಅರ್ಹರು. ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಫೆ.೦೪ ರಂದು ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಬೇಕು.
ಫೆ.೦೬ ರಂದು ಖಾಯಂ ದೈಹಿಕ ಶಿಕ್ಷಣ ಶಿಕ್ಷಕರಿಗೆ ಹಾಗೂ ವಿಶೇಷ ಚೇತನ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಕ್ರೀಡಾ ಸ್ಪರ್ಧೆಗಳನ್ನು ಸಂಘಟಿಸಲಾಗುವುದು.
ಸಾAಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಂಗೀತ, ನೃತ್ಯ ಹಾಗೂ ವಾದ್ಯ ಸಂಗೀತ ವಿಭಾಗಗಳಲ್ಲಿ ಸ್ಪರ್ಧಿಸಬಹುದು. ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರು ಮೊ.ಸಂ: ೯೮೮೦೬೭೦೯೨೫, ರಾ.ಸ.ನೌ.ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿಗಳು ಮೊ.ಸಂ: ೯೯೧೬೩೩೨೩೬೫ ಇವರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮೃತ ಅಸ್ಟಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.