Belagavi

ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತ ಸದಸ್ಯರಿಗೆ ಸನ್ಮಾನ


ಸವದತ್ತಿ: ಗ್ರಾಮ ಪಂಚಾಯತ ಸಾರ್ವತ್ರಿಕ ಚುನಾವಣೆಯಲ್ಲಿ ವಿಜೇತರಾದ ನೂತನ ಗ್ರಾಮ ಪಂಚಾಯತ ಸದಸ್ಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಸ್ಥಳೀಯ ಮಾಮನಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಗ್ರಾಮ ಪಂಚಾಯತ ಸದಸ್ಯರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ರಾದ ಶ್ರೀ ಮಹಾಂತೇಶ ಕವಟಗಿಮಠ, ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ, ಜಿಲ್ಲಾ ಪಂಚಾಯತ ಸದಸ್ಯರಾದ ಅಜೀತಕುಮಾರ ದೇಸಾಯಿ, ತಾಲೂಕ ಪಂಚಾಯತ ಅಧ್ಯಕ್ಷರಾದ ವಿನಯಕುಮಾರ ದೇಸಾಯಿ, ಎ.ಪಿ.ಎಂ.ಸಿ ಅಧ್ಯಕ್ಷರಾದ ಪ್ರಕಾಶ ನರಿ, ಎ ಪಿ ಎಂ ಸಿ ಉಪಾಧ್ಯಕ್ಷರಾದ ಚಂದ್ರಶೇಖರ ಅಳಗೋಡಿ, ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷರಾದ ಬಸಯ್ಯಾ ಹಿರೇಮಠ, ಬಿಜೆಪಿ ಸವದತ್ತಿ ಮಂಡಳ ಅಧ್ಯಕ್ಷರಾದ ಈರಣ್ಣಾ ಚಂದರಗಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರಾಜು ಸಾಲಿಮಠ, ಬಿಜೆಪಿ ಮಹಿಳಾ ಅಧ್ಯಕ್ಷರಾದ ಡಾ: ಶ್ರೀಮತಿ ನಯನಾ ಬಸ್ಮಿ, ಮುನವಳ್ಳಿ ಪುರಸಭೆ ಅಧ್ಯಕ್ಷರಾದ ವಿಜಯ ಅಮಠೆ, ಬಸವರಾಜ ಹನಸಿ, ಶಂಕರ ರಾಯಣ್ಣವರ, ವಿನಾಯಕ ಜಾನ್ವೇಕರ, ಪುಟ್ಟು ಬೇಟಗೇರಿ, ಪ್ರಶಾಂತ ಪವಾರ, ಸೌರಭ ಜಾಡರ, ಜಗದೀಶ ಕೌಜಗೇರಿ, ಉಮೇಶ ಹಾದಿಮನಿ, ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳಗಾವಿ ಜಿಲ್ಲಾ ಸಂಚಾಲಕರು ಹಾಗೂ ಪದಾಧಿಕಾರಿಗಳು, ಸವದತ್ತಿ ಮತ್ತು ಮುನವಳ್ಳಿ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಬಿಜೆಪಿ ಕಾರ್ಯಕರ್ತರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
(ವರದಿ ಈರಣ್ಣಾ ಹುಲ್ಲೂರ)


Leave a Reply