Gadag

ಪದವಿ ಹಾಗೂ ಇತರೆ ವಿದ್ಯಾರ್ಥಿಗಳಿಗೆ ಫೆಬ್ರುವರಿ ೨೮ ರವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ


ಗದಗ  ಜ.೨೯:  ಪದವಿ ಹಾಗೂ ಇತರೆ ವಿದ್ಯಾರ್ಥಿಗಳಿಗೆ ೨೦೨೦-೨೧ ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿರುತ್ತದೆ. ಅದರಂತೆ ೨೦೧೯-೨೦ ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ದಿನಾಂಕ ೩೧-೦೧-೨೦೨೧ ರವರೆಗೆ ಸಂಸ್ಥೆಯ ಬಸ್ಸುಗಳಲ್ಲಿ ಮಾನ್ಯ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ, ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಸಾಕಷ್ಟು ಕಾಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ(೨೦೧೯-೨೦೨೦) ಬಸ್ ಪಾಸನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜುಗಳಿಗೆ ಪಾವತಿಸಿರುವ ರಸೀದಿ ಜೊತೆಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ/ಕಾಲೇಜುಗಳಿಗೆ ತೆರಳಲು ಫೆಬ್ರುವರಿ ೨೮ ರವರೆಗೆ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ.. ಎಲ್ಲಾ ವಿದ್ಯಾರ್ಥಿಗಳು ಪ್ರಸ್ತುತ ವರ್ಷದಲ್ಲಿ ಶಾಲಾ/ಕಾಲೇಜುಗಳಿಗೆ ದಾಖಲಾಗಿರುವ  ಶುಲ್ಕ ಪಾವತಿ ರಸೀದಿಯೊಂದಿಗೆ, ೨೦೧೯-೨೦ ನೇ ಸಾಲಿನ ವಿದ್ಯಾರ್ಥಿ ಬಸ್‌ಪಾಸ್ ತೋರಿಸಿ ಸಂಬಂಧಪಟ್ಟ ಮಾರ್ಗದಲ್ಲಿ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಮತ್ತು ಎಲ್ಲಾ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸೇವಾಸಿಂದು ಮೂಲಕ ಪ್ರಸಕ್ತ ವರ್ಷದ ದಾಖಲಾತಿಗಳನ್ನು ಸಲ್ಲಿಸಿ, ನೂತನ ಪಾಸ್ ಪಡೆಯಬಹುದಾಗಿದೆ.


Leave a Reply