Entertainment

ಇಂದು ಪದ್ಯಗಳ ಸರ್ದಾರ ವಿಶ್ವ ಕವಿ,ಡಾ.ದ.ರಾ.ಬೇಂದ್ರೆಯವರ ಜನ್ಮ ದಿನ


ಬೇಂದ್ರೆಯವರು ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ).

ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು.

೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ.
೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ – ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.
ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ “ಕೃಷ್ಣ ಕುಮಾರಿ”-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.
ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್‌ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ.
ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.
ನಾಡಿನ ತುಂಬೆಲ್ಲಾ ನಡೆದಾಡಿದ ಅವರಲ್ಲಿರುವಂತ ಪ್ರತಿಯೊಂದು ಸಾಹಿತ್ಯದ ನುಡಿಗಳು ಮಾನವನ ನಾಡಿ ಮಿಡಿತದಂತೆ ಹರಿದಾಡಿ ಇಡೀ ಕನ್ನಡ ಸಾಹಿತ್ಯ ರಂಗವನ್ನೆ ಶ್ರೀಮಂತಗೊಳಿಸಿವೆ ಎಂದರೆ ತಪ್ಪಲಾಗಲಾರದು.

🌹ಪ್ರಶಸ್ತಿ, ಪುರಸ್ಕಾರ, ಬಿರುದು🌹
೧೯೪೩ರಲ್ಲಿ ಶಿವಮೊಗ್ಗದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ.
೧೯೫೮ರಲ್ಲಿ ‘ಅರಳು ಮರಳು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
೧೯೬೪ರ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಬೇಂದ್ರೆಯವರಿಗೆ ಸನ್ಮಾನ
೧೯೬೫ರಲ್ಲಿ ಮರಾಠಿಯಲ್ಲಿ ರಚಿಸಿದ “ಸಂವಾದ” ಎಂಬ ಕೃತಿಗೆ ಕೇಳ್ಕರ್ ಬಹುಮಾನ
೧೯೬೮ರಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ಲಭಿಸಿತು
೧೯೭೩ರಲ್ಲಿ ‘ನಾಕುತಂತಿ’ ಕೃತಿಗೆ ಜ್ಞಾನಪೀಠಪ್ರಶಸ್ತಿ
ಕಾಶಿ ವಿದ್ಯಾಪೀಠ, ವಾರಣಾಸಿ, ಮೈಸೂರು ಹಾಗೂ ಕರ್ನಾಟಕ ವಿಶ್ವವಿದ್ಯಾನಿಲಯಗಳ ಗೌರವ ಡಾಕ್ಟರೇಟ್
ಕೇಂದ್ರ ಸಾಹಿತ್ಯ ಅಕಾಡೆಮಿಯ ಫೆಲೋಷಿಪ್ ಪಡೆದರು.

ಸರಳ ಸಜ್ಜನಿಕೆಯ ಅಜ್ಜ ಕನ್ನಡಿಗರ ಆಸ್ತಿ ಎಂಬುದು ನಮ್ಮ ಹೆಮ್ಮೆ……


Leave a Reply