State

ಇಂದು ‘ಕೃಷ್ಣಾ’ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಂದ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ


 

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನದ ಅಂಗವಾಗಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಲಸಿಕೆ ಹಾಕಿದ ಬಳಿಕ ಮಾತನಾಡಿದ ಸಿಎಂ ಬಿ ಎಸ್ ಯಡಿಯೂರಪ್ಪ, ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಂಡು ಪೋಲಿಯೋ ನೀಡಲಾಗುತ್ತಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ ಎಂದು ಪೋಷಕರಿಗೆ ಮನವಿ ಮಾಡಿದರು.
ಪಲ್ಸ್​ ಪೋಲಿಯೋ ಸಂಪೂರ್ಣ ಸುರಕ್ಷಿತವಾಗಿದೆ. ಜೀವ ರಕ್ಷಣೆಗೆ ಎರಡು ಹನಿ ಲಸಿಕೆ ಹಾಕಿಸಿ ಎಂದರು. ರಾಜ್ಯದಲ್ಲಿ 64 ಲಕ್ಷ ಮಕ್ಕಳಿಗೆ ಪೋಲಿಯೋ ನೀಡಲಾಗುತ್ತಿದೆ ಎಂದರು.


Leave a Reply