Belagavi

ಲಕ್ಷ್ಮಣ ಸವದಿ ವಿರುದ್ಧ ಖಾನಾಪುರದ ಬಿಜೆಪಿ ಮುಖಂಡರ ಅಸಮಾಧಾನ..!


ಬೆಳಗಾವಿ ;ಕರ್ನಾಟಕ ಬಿಜೆಪಿ ಅಧ್ಯಕ್ಷರಿಗೆ ಈ ಕುರಿತು ಪತ್ರವನ್ನು ಬರೆಯಲು ಖಾನಾಪುರದ ಬಿಜೆಪಿ ಕಾರ್ಯಕರ್ತರು ತೀರ್ಮಾನಿಸಿದ್ದಾರೆ.

“ಅರವಿಂದ ಪಾಟೀಲ್ ಮುಂದಿನ ಬಿಜೆಪಿ ಅಭ್ಯರ್ಥಿ” ಎಂಬ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಲಕ್ಷ್ಮಣ ಸವದಿ ವಿರುದ್ಧ ಖಾನಾಪುರದ ಬಿಜೆಪಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಬಿಜೆಪಿ ನಾಯಕರು ಸಭೆ ಸೇರಿ ಉಪಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಅರವಿಂದ ಪಾಟೀಲ್ ಖಾನಾಪುರ ಕ್ಷೇತ್ರದ ಎಂಇಎಸ್ ಮಾಜಿ ಶಾಸಕ. ಅರವಿಂದ ಪಾಟೀಲ್ ಮುಂದಿನ ಚುನಾವಣೆ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎಂದು ಲಕ್ಷ್ಮಣ ಸವದಿ ಹೇಳಿರುವುದು ಅಕ್ರೋಶಕ್ಕೆ ಕಾರಣವಾಗಿದೆ.


Leave a Reply