Koppal

ಶ್ರೀಗವಿಸಿದ್ದೇಶ್ವರ ಮಠದ ಆವರಣದಲ್ಲಿ ಪೋಲಿಯೋ ಹನಿ ನೀಡಿಕೆಗೆ ಚಾಲನೆ


ಕೊಪ್ಪಳ, ಜ.: ಮಗುವಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ರಾಷ್ಟಿçÃಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಅವರು ಶ್ರೀಗವಿಸಿದ್ದೇಶ್ವರ ಮಠದ ಆವರಣದಲ್ಲಿ ಇಂದು (ಜ.31) ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿ ಭಾನುವಾರದಿಂದ (ಜ.31 ರಿಂದ) ಫೆಬ್ರವರಿ. 03 ರವರೆಗೆ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಜೀ ಮಾತನಾಡಿ, ಪೋಲಿಯೋ ಕಾಯಿಲೆ ಒಂದು ಮಾರಕರೋಗ ಇದನ್ನು ಈಗಾಗಲೇ ನಿರ್ಮೂಲನೆ ಮಾಡಲಾಗಿದ್ದು, ನಮ್ಮ ದೇಶದ ಪಕ್ಕದ ರಾಷ್ಟçಗಳಾದ ಪಾಕಿಸ್ತಾನ ಮತ್ತು ಅಪಘಾನಿಸ್ತಾನಗಳಲ್ಲಿ ಪೋಲಿಯೊ ಪ್ರಕರಣಗಳು ಇರುವುದರಿಂದ ಮುಂಜಾಗೃತೆಯಾಗಿ ನಮ್ಮ ಭಾರತ ದೇಶದಲ್ಲಿಯೂ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಮ್ಮ ಕೊಪ್ಪಳ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬಹಳ ಸಂತೋಷ. ಜಿಲ್ಲೆಯಲ್ಲಿ 0 ಯಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಲು ಗುರಿಹೊಂದಲಾಗಿದೆ. ಎಲ್ಲಾ ಸಾರ್ವಜನಿಕರು ತಮ್ಮ ಮಕ್ಕಳಿಗೆ ಸಮೀಪದ ಅಂಗನವಾಡಿ ಕೇಂದ್ರ, ಶಾಲೆ, ಉಪಕೇಂದ್ರ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ಬೂತ್‌ಗಳಿಗೆ ಭೇಟಿ ನೀಡಿ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಹಾಗೂ ಶ್ರೀಗವಿಸಿದ್ದೇಶ್ವರ ಜಾತ್ರೆಗೆ ಬಂದAತಹ ಭಕ್ತಾಧಿಗಳು ಮಠದ ಆವರಣದಲ್ಲಿ ತೆರೆದ ಬೂತ್‌ಗಳಲ್ಲಿ ಲಸಿಕೆ ಹಾಕಿಸಿ “ಪೋಲಿಯೊ ಮುಕ್ತ ಭಾರತ” ದೇಶವನ್ನಾಗಿ ಮಾಡಬೇಕೆಂದರು.
ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಅವರು ಕಾರ್ಯಕ್ರಮದ ಕುರಿತು ಮಾತನಾಡಿ, ಪೋಲಿಯೊ ರೋಗ ಒಂದು ಸಂಕ್ರಾಮಿಕ ರೋಗವಾಗಿದ್ದು, ಆರೋಗ್ಯ ಇಲಾಖೆ ಕೋವಿಡ್-19 ಮುಂಜಾಗೃತೆ ತೆಗೆದುಕೊಂಡು ಕ್ರಿಯಾಯೋಜನೆ ರೂಪಿಸಿಕೊಂಡು ಕಾರ್ಯಕ್ರಮದ ಸಿದ್ಧತೆ ಮಾಡಿಕೊಂಡು ಲಸಿಕೆ ಹಾಕುತ್ತಿದ್ದಾರೆ. ಜಿಲ್ಲೆಯಲ್ಲಿ 0 ಯಿಂದ 5 ವರ್ಷದೊಳಗಿನ ಮಕ್ಕಳ ಸಂಖ್ಯೆ 1,79,089 ಇದೆ. ಎಲ್ಲಾ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಮೊದಲ ದಿನ ಬೂತ್‌ನಲ್ಲಿ ಲಸಿಕೆ ನೀಡಲಾಗುವುದು. ನಂತರ ಲಸಿಕಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ನೀಡುತ್ತಾರೆ. ಆದ್ದರಿಂದ ಎಲ್ಲಾ ಸಾರ್ವಜನಿಕರು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಲಕನಂದಾ ಮಾಳಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ರಾಮಾಂಜೇನೆಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಶ್ರೀ ಗವಿಸಿದ್ದೇಶ್ವರ ಆಯುರ್ವೇದಿಕ ಕಾಲೇಜ್‌ನ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು, ಆರೋಗ್ಯ ಶಿಕ್ಷಣಾಧಿಕಾರಿಗಳು, ಹಿರಿಯ ಕಿರಿಯ ಆರೋಗ್ಯ ಸಹಾಯಕರು, ಆಶಾ ಮೇಲ್ವಿಚಾರಕರು, ಸರ್ಕಾರಿಯೇತರ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


Leave a Reply