Koppal

ಯುವ ಕಾರ್ಯಕರ್ತರ ಆಯ್ಕೆಗಾಗಿ ಅರ್ಜಿ ಆಹ್ವಾನ


ಕೊಪ್ಪಳ, ಫೆ. : ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಕೊಪ್ಪಳ ವತಿಯಿಂದ ರಾಷ್ಟಿçÃಯ ಯುವ ಕಾರ್ಯಕರ್ತರ ಆಯ್ಕೆಗಾಗಿ ಅರ್ಜಿ ಅಹ್ವಾನಿಸಲಾಗಿದೆ.
ಅರ್ಹ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಮಾಸಿಕ ರೂ.೫೦೦೦ ಗೌರವ ಧನ ನೀಡಲಾಗುವುದು, ಗ್ರಾಮೀಣ ಯುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಯುವ ಸಂಘಗಳನ್ನು ರಚಿಸುವುದು ಇತರೆ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಏಪ್ರಿಲ್ ೦೧, ೨೦೨೧ಕ್ಕೆ ೧೮ ರಿಂದ ೨೯ ವರ್ಷದೊಳಗಿರಬೇಕು. ೧೦ನೇ ತರಗತಿ ಪಾಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಯುವ ಸಂಘದ ಪದಾಧಿಕಾರಿಗಳು, ಎನ್.ಎಸ್.ಎಸ್, ಎನ್.ಸಿ.ಸಿ, ಹೆಚ್ಚಿನ ವಿದ್ಯಾರ್ಹತೆ ಹೊಂದಿದವರಿಗೆ ಹಾಗೂ ಸಂಬAಧಪಟ್ಟ ತಾಲೂಕಿನ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ನಮೂನೆಗಾಗಿ ನೆಹರು ಯುವ ಕೇಂದ್ರ ಕಚೇರಿ ಅಥವಾ ತಿತಿತಿ.ಟಿಥಿಞs.ಟಿiಛಿ.iಟಿ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಕಛೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಫೆಬ್ರವರಿ ೨೦ ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳು, ಕೊಪ್ಪಳ ದೂ.ಸಂ: ೦೮೫೩೯-೨೩೦೧೧೬, ಮೊ.ಸಂ: ೮೩೧೦೪೬೩೪೮೮ ಗೆ ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಾಂಟು ಪತ್ತಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply