Uncategorized

ಕ್ರೀಡಾ ಇಲಾಖೆ : ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ


ಕೊಪ್ಪಳ, ಫೆ.: ೨೦೨೦-೨೧ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನ ನೀಡುವ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಬೇಕಾಗಿದ್ದು, ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಭಾರತೀಯ ನಾಗರೀಕರಾಗಿರಬೇಕು ಅಥವಾ ಕರ್ನಾಟಕದಲ್ಲಿ ಕನಿಷ್ಠ ಹತ್ತು ವರ್ಷಗಳ ಕಾಲ ಸಾಮಾನ್ಯ ನಿವಾಸಿಯಾಗಿರುವ, ಹಿಂದಿನ ೦೩ ಕ್ಯಾಲೆಂಡರ್ ವರ್ಷಗಳಲ್ಲಿ ನಿರಂತರವಾಗಿ ರಾಜ್ಯವನ್ನು ಪ್ರತಿನಿಧಿಸಿರುವ ಯುವ ಕ್ರೀಡಾಪಟುಗಳಾಗಿರಬೇಕು. ಅಂತರರಾಷ್ಟಿçÃಯ, ರಾಷ್ಟçಮಟ್ಟದ ಕ್ರೀಡಾಕೂಟಗಳಲ್ಲಿ ಅಥವಾ ರಾಜ್ಯ ಮಟ್ಟದ /ಅಂತರರಾಜ್ಯ/ಅAತರ ವಿಶ್ವವಿದ್ಯಾಲಯ/ರಾಜ್ಯಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗಣನೀಯ ಸಾಧನೆ ದಾಖಲಿಸಿರುವ ಕ್ರೀಡಾಪಟುಗಳು (ವಿಕಲಚೇತನ ಕ್ರೀಡಾಪಟುಗಳು ಸೇರಿದಂತೆ) ಪ್ರಸ್ತಾವನೆ ಸಲ್ಲಿಸಬಹುದಾಗಿದೆ.
ಆದ್ದರಿಂದ ಅರ್ಹತೆ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕ್ರೀಡಾಪಟುಗಳು (ವಿಕಲಚೇತನ ಕ್ರೀಡಾಪಟುಗಳು ಸೇರಿದಂತೆ) ಫೆ.೦೬ ರೊಳಗಾಗಿ ಪ್ರಸ್ತಾವನೆಗಳನ್ನು ಈ ಕಛೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಕೊಪ್ಪಳ ಇಲ್ಲಿಗೆ ಕಛೇರಿ ವೇಳೆಯಲ್ಲಿ ಅಥವಾ ಮೊ.ಸಂ: ೯೪೪೮೫-೨೯೯೬೮ ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರಾದ ಅಮೃತ ಅಸ್ಟಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply