ಫೆ.೦೮ ರಂದು ಗಂಗಾವತಿಯಲ್ಲಿ ಉದ್ಯೋಗ ಮೇಳ
ಕೊಪ್ಪಳ, ಫೆ.೦೩ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಫೆ.೦೮ ರಂದು ರಾಷ್ಟಿçÃಯ ವೃತ್ತಿ ಸೇವಾ ಯೋಜನೆಯಡಿ(ಎನ್.ಸಿ.ಎಸ್.) ಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆನೆಗುಂದಿ ರಸ್ತೆ, ಸಾಯಿ ದೇವಸ್ಥಾನದ ಹತ್ತಿರ, ಗಂಗಾವತಿಯಲ್ಲಿ ಫೆ.೦೮ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೦೪ ಗಂಟೆಯವರೆಗೆ ನಡೆಯಲಿದೆ. ಈ ಮೇಳದಲ್ಲಿ ೨೦ ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ., ಡಿಪ್ಲೋಮಾ, ಎಲ್ಲಾ ಪದವೀಧರರು ಹಾಗೂ ಕಂಪ್ಯೂಟರ್ ತರಬೇತಿ ಪಡೆದ ೧೮ ರಿಂದ ೩೫ ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಉದ್ತೋಗಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬAಧಿಸಿದ ಅಂಕಪಟ್ಟಿಗಳ ನಕಲು ಪ್ರತಿಗಳು, ಬಯೋಡೆಟಾ, ಆಧಾರ್ ಸಂಖ್ಯೆ ಹಾಗೂ ಭಾವಚಿತ್ರಗಳೊಂದಿಗೆ ಹಾಜರಾಗಬೇಕು. ಯಾವುದೇ ರೀತಿಯ ಪ್ರವೇಶ ಶುಲ್ಕವಿರುವುದಿಲ್ಲ.
ಹೆಚ್ಚಿನ ಮಾಹಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ದೂ.ಸಂ: ೦೮೫೩೯-೨೨೦೮೫೯, ೮೧೦೫೮೪೮೯೯೧ ಸಂಖ್ಯೆಗಳಿಗೆ ಸಂಪರ್ಕಿಸಬಹುದು. ಹಾಗೂ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕೊವಿಡ್-೧೯ ರ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.