Uncategorized

ಇಂದು ಕನ್ನಡದ ದಲಿತ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನ


 

ಸಿದ್ಧಲಿಂಗಯ್ಯನವರು ಕನ್ನಡದ ಲೇಖಕರಲ್ಲೊಬ್ಬರು. ‘ದಲಿತ ಕವಿ’ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿರುವವರು.
ಮಂಡ್ಯದಲ್ಲಿ ೨೦೧೨ರಲ್ಲಿ ನಡೆದ ‘ತತ್ತ್ವಪದಕಾರರ ಸಮಾವೇಶ’ದಲ್ಲಿ ಸಿದ್ದಲಿಂಗಯ್ಯ.

*ಜನನ, ಜೀವನ*
ಸಿದ್ಧಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ‘ಮಾಗಡಿ’ ತಾಲ್ಲೋಕಿನ ‘ಮಂಚನಬೆಲೆ’ ಗ್ರಾಮದಲ್ಲಿ ೧೯೫೪ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.
*ಗೌರವ, ಪ್ರಶಸ್ತಿಗಳು*
ಉತ್ತಮ ಚಲನಚಿತ್ರಗೀತ ರಚನೆಗಾಗಿ ಕರ್ನಾಟಕ ಸರ್ಕಾರ ಪ್ರಶಸ್ತಿ-೧೯೮೪
ರಾಜ್ಯೋತ್ಸವ ಪ್ರಶಸ್ತಿ -ಕರ್ನಾಟಕ ಸರ್ಕಾರ-೧೯೮೬
ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ -೧೯೯೨
ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ -೧೯೯೬
ಜಾನಪದ ತಜ್ಞ ಪ್ರಶಸ್ತಿ -೨೦೦೧
೨ ಬಾರಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ.
ಸಂದೇಶ್ ಪ್ರಶಸ್ತಿ -೨೦೦೧
ಡಾ.ಅಂಬೇಡ್ಕರ್ ಪ್ರಶಸ್ತಿ -೨೦೦೨
ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ -೨೦೦೨
ಬಾಬುಜಗಜೀವನರಾಮ್ ಪ್ರಶಸ್ತಿ -೨೦೦೫
ನಾಡೋಜ ಪ್ರಶಸ್ತಿ -೨೦೦೭
ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ -೨೦೧೨
ಆಳ್ವಾಸ್ ನುಡಿಸಿರಿ ಪ್ರಶಸ್ತಿ -೨೦೧೨
ಶ್ರವಣಬೆಳಗೊಳದಲ್ಲಿ ನಡೆದ ೮೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು.
ನೃಪತುಂಗ ಪ್ರಶಸ್ತಿ -೨೦೧೮
ಪಂಪ ಪ್ರಶಸ್ತಿ – ೨೦೧೯


Leave a Reply