Belagavi

೨೦೨೦-೨೧ನೇ ಸಾಲಿಗೆ ೬ನೇ ತರಗತಿಗೆ ದಾಖಲಾತಿ ಪಡೆಯಲು ಪ್ರವೇಶ ಪರೀಕ್ಷೆ


ಬೆಳಗಾವಿ ಫೆ.೦೪: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಳಗಾವಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹೂಲಿಕಟ್ಟಿ/ ಚಿಕ್ಕೋಡಿ/ ಮೂಡಲಗಿ/ ಸಾಲಹಳ್ಳಿ/ ಬೆಳಗಾವಿ ನಗರ ಶಾಲೆಗಳಲ್ಲಿ ೨೦೨೦-೨೧ನೇ ಸಾಲಿಗೆ ೬ನೇ ತರಗತಿಗೆ ದಾಖಲಾತಿ ಪಡೆಯಲು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷೆಯನ್ನು ರವಿವಾರ ಫೆ.೨೧ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ನಡೆಸಲಾಗುವುದು.
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹೂಲಿಕಟ್ಟಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಚಿಕ್ಕೋಡಿ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ರಾಮತೀರ್ಥ ನಗರ ಬೆಳಗಾವಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೂಡಲಗಿ ರಾಣಿ ಚನ್ನಮ್ಮಾ ವಸತಿ ಶಾಲೆ, ರಾಮದುರ್ಗದಲ್ಲಿ ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಗೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್‌ನ್ನು ಮಾತ್ರ ಉಪಯೋಗಿಸಬೇಕು.
ಅಭ್ಯರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರವನ್ನು ಸಂಬAಧಪಟ್ಟ ವಸತಿ ಶಾಲೆಯ ಪ್ರಾಂಶುಪಾಲರ ಮುಖಾಂತರ ಪಡೆದು, ಪ್ರವೇಶ ಪತ್ರದಲ್ಲಿ ನೀಡಿರುವ ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಂಡು ನಿಗದಿತ ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಸಂಬAಧಪಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ತಗೆದುಕೊಳ್ಳಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply