Belagavi

ಫೆ.೧೧ ರಂದು ಕ್ಯಾಂಪಸ್ ಸಂದರ್ಶನ

ಕೊಪ್ಪಳ, ಫೆ.೦೫ : ಐಟಿಐ ತರಬೇತಿ ಪಡೆದ ಅಭ್ಯರ್ಥಿಗಳಿಗಾಗಿ ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫೆಬ್ರವರಿ.೧೧ ರಂದು ಬೆಳಿಗ್ಗೆ ೧೦ ಗಂಟೆಗೆ ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿ ಜಿಲ್ಲೆಯ, ಸಂಡೂರಿನ ಜೆಎಸ್‌ಡಬ್ಲು ಸೆವೆರ್ ಫೀಲ್ಡ್ ಸ್ಟçಕ್ಚರ್ ಲಿ. ಕಂಪನಿ ಅವರು ತಮ್ಮ ಸಂಸ್ಥೆಗಾಗಿ ಸಂದರ್ಶನ ಕೈಗೊಳ್ಳಲಿದ್ದು, ೧೮ ರಿಂದ ೨೪ ವರ್ಷ ವಯೋಮಿತಿಯೊಳಗಿನ ಎಲೆಕ್ಟಿçಷಿಯನ್, ಫಿಟ್ಟರ್, ಟರ್ನರ್, ಮಷಿನಿಸ್ಟ್ ಮತ್ತು ವೆಲ್ಡರ್ ವೃತ್ತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಭಾಗವಹಿಸಬಹುದು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ ರೂ. ೯,೫೦೦ ಸ್ಟೆöÊಫಂಡ್ ಮತ್ತು ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಮತ್ತು ಐಟಿಐ ಅಂಕಪಟ್ಟಿಗಳು ಹಾಗೂ ಇತರೆ ಪ್ರಮಾಣ ಪತ್ರಗಳು ಮೂಲ ಮತ್ತು ಝರಾಕ್ಸ್ ಪ್ರತಿಗಳು, ಪಾಸ್‌ಪೋರ್ಟ್ ಅಳತೆಯ ಫೋಟೋಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿಯೇ ಸಂದರ್ಶನಕ್ಕೆ ಆಗಮಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: ೯೯೬೪೨೪೭೦೯೮ ಮತ್ತು ೮೬೧೮೯೫೨೯೬೧ ಗೆ ಸಂಪರ್ಕಿಸಬಹುದು ಎಂದು ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker