ಗದಗ ಫೆ.5: ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಹಾಗೂ ಸಿಆಸುಇ (ಚುನಾವಣೆ) ಪದನಿಮಿತ್ತ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ಸಂಜೀವ ಕುಮಾರ ಅವರು ಫೆ.11 ರಂದು ದಾಂಡೇಲಿಯಿಂದ ಮಧ್ಯಾಹ್ನ 12.30 ಗಂಟೆಗೆ ಗದುಗಿಗೆ ಆಗಮಿಸುವರು. ನಂತರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ನೂತನವಾಗಿ ನಿರ್ಮಿಸಲಾದ ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ. ಸಾಯಂಕಾಲ 5 ಗಂಟೆಗೆ ಧಾರವಾಡ ನಗರಕ್ಕೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
: ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ .ವ್ಹಿ ಅವರು ಫೆ.11 ರಂದು ಹುಬ್ಬಳ್ಳಿಯಿಂದ ಗದುಗಿಗೆ ಆಗಮಿಸಿ ಜಿಲ್ಲಾಡಳಿತ ಭವನದಲ್ಲಿ ನೂತನವಾಗಿ ನಿರ್ಮಿಸಲಾದ ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣದ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳೊಂದಿಗೆ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.