ಉಚಿತ ಕೃತಕ ಕಾಲು ಜೋಡಣಾ ಶಿಬಿರ ಜ.11 ರಂದು

ಬಳ್ಳಾರಿ,ಜ.07 : ವಿಕಲಚೇತನರ ಪುನರ್ವಸತಿ ಕೇಂದ್ರ ಹಾಗೂ ಆಂಧ್ರಪ್ರದೇಶದ ಮಂಗಳಪಾಲೆAನ ಶ್ರೀ ಗುರುದೇವ ಚಾರಿಟಬಲ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಕೃತಕ ಕಾಲು ಜೋಡಣಾ ಶಿಬಿರವು ಇದೇ ಜ.11 ರಂದು ಬೆಳಗ್ಗೆ 9ಕ್ಕೆ ನಗರದ ವಿಮ್ಸ್ ಆವರಣದಲ್ಲಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಕಚೇರಿ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದಲ್ಲಿ ಈಗಾಗಲೇ ಗುರುತಿಸಿರುವ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ನೀಡಲಾಗುತ್ತದೆ. ಕೃತಕ ಕಾಲು ಬೇಕಾದ ವಿಕಲಚೇತನರು ಶಿಬಿರಕ್ಕೆ ಹಾಜರಾಗಿ ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 6364652857/9731961326/9449478046 ಸಂಪರ್ಕಿಸಬಹುದಾಗಿದೆ.

Leave A Reply

Your email address will not be published.