
ಬಳ್ಳಾರಿ :
ಅಖಂಡ ಬಳ್ಳಾರಿ ಜಿಲ್ಲೆಯನ್ನು ಎರಡು ಭಾಗಗಳಾಗಿ ವಿಭಜಿಸಿ ಅಧಿಕೃತವಾಗಿ ಆದೇಶ ಹೊರಡಿಸಿದ ಯಡಿಯೂರಪ್ಪ ಸರಕಾರದ ವಿರುದ್ಧ ಕರ್ನಾಟಕ ಜನಸೈನ್ಯ ವತಿಯಿಂದ ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿ ಸಂಜೆ ೪.೩೦ ಗಂಟೆಗೆ ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಲಾಯಿತು.
ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ರಸ್ತೆಗಿಳಿದು ಹೋರಾಟಗಳನ್ನು ಮಾಡುತ್ತಿದ್ದರೂ, ಇದ್ಯಾವುದನ್ನೂ ಲೆಕ್ಕಿಸದೇ, ಹೋರಾಟಗಾರರನ್ನು ಕಿಮ್ಮತ್ತು ಲೆಕ್ಕಸದೇ ವಿಜಯನಗರ ಜಿಲ್ಲೆಯ ಆದೇಶವನ್ನು ಹೊರಡಿಸಿ ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಮಾಡಲಾಗಿದೆ ಎಂದು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೆಲ್ಲಾ ಆದರೂ ಬಳ್ಳಾರಿ ಜಿಲ್ಲೆಯ ಸಮಸ್ತ ಜನಾಂಗದ ಪರವಾಗಿ ದಿನಾಂಕ ೦೫.೦೨.೨೦೨೧ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆ ಇದ್ದು, ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆಯ ವ್ಯಕ್ತಪಡಿಸಿದರು.
ವಿಜಯನಗರ ಜಿಲ್ಲೆಯ ಅಧಿಕೃತ ಆದೇಶವನ್ನು ಕೂಡಲೇ ಹಿಂಪಡೆಯಬೇಕು, ಇಲ್ಲದಿದ್ದಲ್ಲಿ ಇಡೀ ಜಿಲ್ಲೆಯಲ್ಲಿ ಅಗು-ಹೋಗುಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಜನಸೈನ್ಯದ ರಾಜ್ಯಾಧ್ಯಕ್ಷರಾದ ಕೆ.ರ್ರಿಸ್ವಾಮಿ, ಉತ್ತರ ಕರ್ನಾಟಕ ಉಪಾಧ್ಯಕ್ಷರಾದ ಫಯಾಜ್ ಭಾಷ, ನಗರ ಉಪಾಧ್ಯಕ್ಷ ಗೋವಿಂದು, ನಾಸೀರ್ ಹನುಮಂತ, ಚಂಚಯ,ನವೀನ್ ಮಂಜು,ಎರ್ರಿಸ್ವಾಮಿ,ಸೇರಿದಂತೆ ನೂರಕ್ಕೂ ಹೆಚ್ಚು ಕಾರ್ಯಕರ್ತರು ಉಪಸ್ಥಿತರಿದ್ದರು.