Koppal

ಮಹಿಳಾ ಅಪ್ರೆಂಟಿಸ್ ತರಬೇತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕೊಪ್ಪಳ ಫೆ.೦೯ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆಗಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ಫೆಬ್ರವರಿ.೨೦ ರವರೆಗೆ ವಿಸ್ತರಿಸಲಾಗಿದೆ.
ಅಪ್ರೆಂಟಿಸ್ ಅವಧಿಯು ಹತ್ತು ತಿಂಗಳದ್ದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.
ಪ್ರತಿ ಅಭ್ಯರ್ಥಿಗೆ ಮಾಹೆಯಾನ ರೂ.೧೫ ಸಾವಿರದಂತೆ ಸಂಭಾವನೆ ನೀಡಲಾಗುವುದು. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಜಿಲ್ಲೆಯ ಮಹಿಳಾ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ಸಿಗದಿದ್ದಲ್ಲಿ ಅಕ್ಕ ಪಕ್ಕದ ಜಿಲ್ಲೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ, ಅರ್ಜಿ ಸಲ್ಲಿಸುವವರ ವಯೋಮಿತಿ ೪೦ ವರ್ಷ ದಾಟಿರಬಾರದು.
ಅರ್ಜಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಪ್ಪಳ ಕಚೇರಿಯಲ್ಲಿ ಪಡೆದುಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತ ಭವನದಲ್ಲಿನ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಪ್ಪಳ ಕಚೇರಿಯನ್ನು ಅಥವಾ ದೂ:೦೮೫೩೯-೨೨೦೬೦೭ ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker