Bengaluru

ಬಿಪಿಎಲ್ ಕಾರ್ಡ್ ಬಗ್ಗೆ ವಿವಾದ ಸೃಷ್ಠಿ: ಸಚಿವರ ಸ್ಪಷ್ಟನೆ.!

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇರುವವರಿಗೆ ಬಿಪಿಎಲ್ ಕಾರ್ಡ್ ರದ್ದು ಎಂಬ ವಿಚಾರವನ್ನು ಸಚಿವರ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ್ತ ಸಚಿವ ಉಮೇಶ್ ಕತ್ತಿ, ಸ್ಪಷ್ಟನೆ ನೀಡಿದ್ದು, ಬಿಪಿಎಲ್ ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

ಸಚಿವರ ಹೆಳಿಕೆಗೆ ಸ್ವಪಕ್ಷೀಯ ನಾಯಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ರಾಜ್ಯಾದ್ಯಂತ ಸಾರ್ವಜನಿಕರು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನಿಡಿರುವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ. ಮುಂದೆಯೂ ಯಾವುದೇ ತಿದ್ದುಪಡಿ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker