Uttarakhand

ಉತ್ತರಾಖಂಡ: ಸಾವಿನ ಸಂಖ್ಯೆ ೫೩ಕ್ಕೆ ಏರಿಕೆ..!

ಉತ್ತರಾಖಂಡ: ಉತ್ತರಾಖಂಡದ ತಪೋವನಲ್ಲಿ ನೀರ್ಗಲ್ಲು ಕುಸಿತದ ಪರಿಣಾಮ ಸಂಭವಿಸಿದ ಪ್ರವಾಹ ದುರಂತದಲ್ಲಿ ಮೃತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಅವಶೇಷಗಳ ಅಡಿಯಿಂದ ಸೋಮವಾರದಂದು ಮೂರು ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಚಮೋಲಿ ಜಿಲ್ಲೆಯ ಆದಿತಿ ಸುರಂಗ ಹಾಗೂ ಎನ್‌ಟಿಪಿಸಿಯ ತಪೋವನ-ವಿಷ್ಣುಗಡ ಯೋಜನೆ ಪ್ರದೇಶದಿಂದ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವಾತಿ ಎಸ್. ಭದೋರಿಯಾ ತಿಳಿಸಿದ್ದಾರೆ.

ಕೆಸರು ತುಂಬಿದ ಸುರಂಗದಲ್ಲೀಗ ಉತ್ಖನನ ಮಾಡುವ ಯಂತ್ರದಿಂದ ಮಾತ್ರ ರಕ್ಷಣಾ ಕಾರ್ಯಾಚರಣೆ ನಡೆಸಲು ಸಾಧ್ಯ. ಕ್ಯಾಮರಾ ಅಥವಾ ಪೈಪ್ ಲಗತ್ತಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು. ತಪೋವನ ಎಸ್‌ಎಫ್‌ಟಿನಲ್ಲಿ ಶನಿವಾರ ಕೊರೆಯುವ ಕಾಮಗಾರಿ ಪೂರ್ಣಗೊಳಿಸಲಾಗಿತ್ತು. ಅಲ್ಲದೆ ಒಳಗೆ ಸಿಲುಕಿದವರ ಪತ್ತೆಯಾಗಿ ಕ್ಯಾಮರಾ ಆಳವಡಿಸುವ ಪ್ರಯತ್ನವು ಆಗಿದೆ ಅದರೆ ಅಲ್ಲಿ ಕೆಸರು ತುಂಬಿದ ನೀರಿನಿಂದಾಗಿ ಅದು ವಿಫಲವಾಗಿತ್ತು.

ಫೆಬ್ರವರಿ 7ರಂದು ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿತ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿ ದುರಂತ ಸಂಭವಿಸಿತ್ತು. 151 ಮಂದಿ ಈಗಲೂ ನಾಪತ್ತೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಅದರಲ್ಲೂ ಸ್ಪಷ್ಟವಾಗಿ ಏನು ತಿಳಿಯಲು ಸಾಧ್ಯವಾಗುತ್ತಿಲ್ಲ. ಮತ್ತು ಪ್ರವಾಹದಲ್ಲಿ ಸಿಲುಕಿರುವ ಕಾರ್ಮಿಕರು ಬದುಕುಳಿದಿರುವ ಸಾಧ್ಯತೆ ಕ್ಷೀಣವೆನಿಸಿದೆ. ಪರಿಸ್ಥಿತಿ ಹಾಗಿದ್ದರೂ ಭರವಸೆಯನ್ನು ಇನ್ನು ಕೈಬಿಟ್ಟಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker