vijayapur

ಕಡಲೆ ಖರೀದಿಸಲು ಬೆಂಬಲ ಬೆಲೆ ಯೋಜನೆಯಡಿ

ಪ್ರತಿ ಎಕರೆಗೆ ೪ ಕ್ವಿಂಟಾಲ್, ಪ್ರತಿ ರೈತರಿಂದ ಗರಿಷ್ಟ ೧೫ ಕ್ವಿಂಟಲ್ ಖರೀದಿ-ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್

ವಿಜಯಪುರ ಫೆ.೧೭ : ಸರಕಾರದ ಆದೇಶದಂತೆ ೨೦೨೦-೨೧ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವ ಎಫ್.ಎ.ಕ್ಯೂ ಗುಣಮಟ್ಟದ ಕಡಲೆ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ಕೇಂದ್ರ ಸರಕಾರದ ಬೆಂಬಲ ಬೆಲೆ ರೂ. ೫೧೦೦ ದರದಂತೆ ಕಡಲೆ ಖರೀದಿಸಲು ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿಗಳನ್ವಯ ರೈತರ ನೋಂದಣಿಯನ್ನು ೩೦-೦೪-೨೦೨೧ ರವರೆಗೆ ಹಾಗೂ ಖರೀದಿ ಅವಧಿಯನ್ನು ೨೨-೦೨-೨೦೨೧ ರಿಂದ ೧೪-೦೫-೨೦೨೧ ರ ವರೆಗೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ನಡೆದ ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಪ್ರತಿ ಎಕರೆಗೆ ೪ ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ ೧೫ ಕ್ವಿಂಟಲ್ ಖರೀದಿ ಪ್ರಮಾಣ ನಿಗದಿಪಡಿಸಿ ಖರೀದಿ ತಕ್ಕದ್ದು ಹಾಗೂ ನೋಂದಣಿ ಕಾಲಾವಧಿಯನ್ನು ಆದೇಶ ಹೊರಡಿಸಿದ ದಿನಾಂಕದಿAದ ೩೦-೦೪-೨೦೨೧ ರ ವರೆಗೆ ಹಾಗೂ ಖರೀದಿ ಪ್ರಕ್ರಿಯೆಯನ್ನು ದಿನಾಂಕ: ೨೨-೦೨-೨೦೨೧ ರಿಂದ ೧೪-೦೫-೨೦೨೧ ರ ವರೆಗೆ ನಿಗದಿಪಡಿಸಲಾಗಿದೆ.
ರೈತರ ಹೆಸರಿನ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ಡಿಬಿಟಿ ಮೂಲಕ ಜಮಾ ಆಗುವಂತೆ ಪಾವತಿ ಮಾಡತಕ್ಕದ್ದು, ಖರೀದಿ ಕೇಂದ್ರಗಳಲ್ಲಿ ಲೋಪ ದೋಷ ಕಂಡುಬAದಲ್ಲಿ ಸಂಬAಧಿಸಿದ ಸಂಸ್ಥೆಗಳೇ ನೇರ ಹೊಣೆಯಾಗುವುದು ಮತ್ತು ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಉಪ ನಿಬಂಧಕರು, ಸಹಕಾರ ಸಂಘಗಳು, ವಿಜಯಪುರ ಇವರಿಗೆ ಸೂಚಿಸಿದರು.
ಕಡಲೆ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕಡಲೆ ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು.
ಖರೀದಿ ಕೇಂದ್ರಗಳಲ್ಲಿ ಕಡಲೆ ಉತ್ಪನ್ನವನ್ನು ಖರೀದಿಸುವ ಪೂರ್ವದಲ್ಲಿ ರೈತರ ನೊಂದಣಿಯನ್ನು ಎನ್ .ಆಯ್. ಸಿ ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನಗಳನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾAಶವನ್ನು ಸೂಕ್ತವಾಗಿ ಉನ್ನತೀಕರಿಸಿ ಕಡಲೆ ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಡಿ ನೊಂದಾಯಿಸಲು ಬಳಸಬೇಕು ಎಂದು ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅದರಂತೆ ಎನ್. ಆಯ್. ಸಿ. ಸಂಸ್ಥೆಯು ಅಭಿವೃದ್ಧಿಪಡಿಸಿರುವ ಈ ನೊಂದಣಿ ತಂತ್ರಾAಶವು ಈಗಾಗಲೇ ಈಖUIಖಿS ತಂತ್ರಾAಶದೊAದಿಗೆ ಸಂಯೋಜಿಸಲಾಗಿದೆ. ಈ ತಂತ್ರಾAಶದಲ್ಲಿ ರೈತರಿಗೆ ಸಂಬAಧಿಸಿದ ವಿವರಗಳನ್ನು ಭೂಮಿ, ಯೂಆಯ್ ಡಿಎಆಯ್, ಬೆಳೆ ಸಮೀಕ್ಷೆ ದತ್ತಾಂಶದೊAದಿಗೆ ತಾಳೆ ಮಾಡಿ ವಿವರಗಳನ್ನು ಇಂದ್ರಿಕರಿಸಲಾಗಿದೆ.
ಈ ವಿವರಗಳನ್ನು ಬೆಂಬಲ ಬೆಲೆ ಯೋಜನೆಯಡಿ ಸಿದ್ಧಪಡಿಸಿದ ತಂತ್ರಾAಶಕ್ಕೆ ವಿದ್ಯುನ್ಮಾನ ರೀತಿಯಲ್ಲಿ ಒದಗಿಸಲಾಗುತ್ತದೆ. ಬೆಂಬಲ ಬೆಲೆ ಯೋಜನೆಯಡಿ ನೊಂದಣಿ ಮಾಡಿದ ನಂತರ ಎನ್. ಆಯ್. ಸಿ. ತಂತ್ರಾAಶದಿAದ ನ್ಯಾಫೆಡ್ ಸಂಸ್ಥೆಯ ತಂತ್ರಾAಶಕ್ಕೆ ರೈತರ ನೊಂದಣಿ ಮಾಹಿತಿಯನ್ನು ಒದಗಿಸಲಾಗುವುದು. ನ್ಯಾಫೆಡ್ ಸಂಸ್ಥೆಯು ತಮ್ಮ ತಂತ್ರಾAಶದಲ್ಲಿ ಈ ಮಾಹಿತಿಯನ್ನು ಬಳಸಿ ರೈತರಿಂದ ಕಡಲೆ ಉತ್ಪನ್ನವನ್ನು ಖರೀದಿ ಕೇಂದ್ರಗಳಿAದ ಖರೀದಿಸಬೇಕು ಎಂದು ಅವರು ಸೂಚಿಸಿದರು.
ನ್ಯಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳ (ಮಾರ್ಕಫೆಡ್) ಮತ್ತು ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಸಂಸ್ಥೆಗಳನ್ನಾಗಿ ನೇಮಿಸಲಾಗಿದೆ.
ಕೋವಿಡ್-೧೯ ಹರಡುವಿಕೆ ಹಿನ್ನೆಲೆಯಲ್ಲಿ ನಿಗದಿತ ಸಾಮಾಜಿಕ ಅಂತರ ನೈರ್ಮಲ್ಯ ಕಾಪಾಡಬೇಕು ಹಾಗೂ ವೈರಾಣು ಹರಡುವಿಕೆ ತಡೆಗಟ್ಟುವ ಬಗ್ಗೆ ಕೇಂದ್ರ-ರಾಜ್ಯ ಸರಕಾರ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದರು.
ವಿಜಯಪುರ ಜಿಲ್ಲೆಯಲ್ಲಿ ೬೦೩೨೩ ಹೆಕ್ಟೇರು ಕ್ಷೇತ್ರದಲ್ಲಿ ಬಿತ್ತನೆಯಾಗಿದ್ದು ಅಂದಾಜು ೩೬೧೯೩೮ ಕ್ವಿಂಟಲ್ ಇಳುವರಿ ಬರಬಹುದೆಂದು ಕೃಷಿ ಇಲಾಖೆ ಅಧಿಕಾರಿಗಳು ಸಭೆಗೆ ತಿಳಿಸಿದರು. ಮಾರುಕಟ್ಟೆಯಲ್ಲಿ ಪ್ರಸ್ತುತ ಪ್ರತಿ ಕ್ವಿಂಟಲ್‌ಗೆ ೪೬೦೦ ೪೭೫೦ ರವರೆಗೆ ಮಾರಾಟವಾಗುತ್ತಿವೆ ಎಂದು ಮಾರುಕಟ್ಟೆ ಅಧಿಕಾರಿಗಳು ಸಭೆಗೆ ತಿಳಿಸಿದರು.
೨೦೨೦-೨೧ ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬೇಡಿಕೆ ಬಂದ ಕೃಷಿ ಪತ್ತಿನ ಸಹಕಾರಿ ಸಂಘಗಳು/ಟಿ.ಎ.ಪಿ.ಸಿ.ಎಮ್.ಎಸ್ ಸಂಸ್ಥೆಗಳನ್ನು ಖರೀದಿ ಕೇಂದ್ರಗಳೆAದು ಪರಿಗಣಿಸಿ ರೈತರ ನೋಂದಣಿಯೊAದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಅದರಂತೆ ಕಡಲೆ ದಾಸ್ತಾನು ಕುರಿತು ವಿಜಯಪುರ ಜಿಲ್ಲೆಯ ಉಗ್ರಾಣಗಳಲ್ಲಿ ೧೩೫೦೦೦ ಕ್ವಿಂಟಾಲ್ ದಾಸ್ತಾನು ಮಾಡಲು ಸ್ಥಳವಕಾಶ ಲಭ್ಯವಿದ್ದು ದಾಸ್ತಾನು ಪೂರ್ಣಗೊಂಡ ನಂತರ ಪಕ್ಕದ ಜಿಲ್ಲೆಯ ಗೋದಾಮುಗಳಲ್ಲಿ ಸಾಗಾಣಿಕೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಜಿಲ್ಲೆಯ ಮಾರುಕಟ್ಟೆ ಅಧಿಕಾರಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker