Koppal

ಜಿಲ್ಲೆಯಲ್ಲಿ ಇಂದ್ರಧನುಷ್ ೩.೦ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ : ಎಂ.ಪಿ.ಮಾರುತಿ

ಕೊಪ್ಪಳ, ಫೆ. ೨೦: ಜಿಲ್ಲೆಯಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನದ ರಾಷ್ಟಿçÃಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಾದ್ಯಂತ ತೀವ್ರಗೊಂಡ ಇಂದ್ರಧನುಷ್ ೩.೦ ಮೊದಲನೇಯ ಸುತ್ತು ಕಾರ್ಯಕ್ರಮವನ್ನು ಫೆಬ್ರವರಿ ೨೨ ರಿಂದ ೨೬ ವರೆಗೆ ಹಾಗೂ ಎರಡನೇ ಸುತ್ತು ಮಾರ್ಚ್ ೨೨ ರಿಂದ ೨೬ ರವರೆಗೆ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಗರ್ಭಿಣಿಯರಿಗೆ ಹಾಗೂ ೦ ರಿಂದ ೨ ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲು ಅಗತ್ಯ ಯೋಜನೆ ರೂಪಿಸಿ, ಕ್ರಮ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಅವರು ಹೇಳಿದರು.
ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟಿçÃಯ ಆರೋಗ್ಯ ಅಭಿಯಾನದ ರಾಷ್ಟಿçÃಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಾದ್ಯಂತ ತೀವ್ರಗೊಂಡ ಇಂದ್ರಧನುಷ್ ೩.೦ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂದ್ರಧನುಷ್ ೩.೦ ಕಾರ್ಯಕ್ರಮದ ಮೊದಲನೇ ಸುತ್ತು ಫೆಬ್ರವರಿ ೨೨, ೨೩,೨೪ ಮತ್ತು ೨೬ ರಂದು ಮತ್ತು ಎರಡನೇ ಸುತ್ತು ಮಾರ್ಚ್ ೨೨, ೨೩, ೨೪ ಮತ್ತು ೨೬ ರಂದು ನಡೆಯಲಿವೆ. ರಾಷ್ಟಿçÃಯ ಆರೋಗ್ಯ ಅಭಿಯಾನದ ರಾಷ್ಟಿçÃಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ಆಯ್ದ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಒಟ್ಟು ೧೯೭ ಗರ್ಭಿಣಿಯರಿಗೆ ಹಾಗೂ ೧,೧೬೦ ಹುಟ್ಟಿನಿಂದ ೨ (೦-೨)ವರ್ಷಗಳ ಒಳಗಿನ ಮಕ್ಕಳಿಗೆ ೧೮೦ ಲಸಿಕಾ ಸತ್ರಗಳ ಮೂಲಕ ವಯಸ್ಸಿಗನುಗುಣವಾಗಿ ಲಸಿಕೆ ನೀಡುವ ಯೋಜನೆಯನ್ನು ರೂಪಿಸಲಾಗಿದ್ದು, ಈ ಅಭಿಯಾನಕ್ಕೆ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಹಕರಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ನಗರ ಕೊಳಚೆ ಪ್ರದೇಶ, ಅಲೆಮಾರಿಗಳ ವಾಸಸ್ಥಳ, ಇಟ್ಟಿಗೆ ಭಟ್ಟಿಗಳು, ಕಟ್ಟಡ ನಿರ್ಮಾಣ ಸ್ಥಳಗಳು, ಹಾಗೂ ಇತರೆ ಪ್ರದೇಶಗಳಲ್ಲಿನ ಗರ್ಭಿಣಿ ಹಾಗೂ ಮಕ್ಕಳಿಗೆ ಮೊಬೈಲ್ ತಂಡಗಳ ಮೂಲಕ ಲಸಿಕಾ ಸತ್ರಗಳನ್ನು ಆಯೋಜಿಸಿ ಲಸಿಕೆಯಿಂದ ವಂಚಿತ ಹಾಗೂ ಬಿಟ್ಟು ಹೋದ ಮಕ್ಕಳಿಗೆ ಲಸಿಕೆ ನೀಡಬೇಕು. ಲಸಿಕೆಯಿಂದ ವಂಚಿತ ಗರ್ಭಿಣಿಯರು ಹಾಗೂ ಮಕ್ಕಳನ್ನು ಪೋಷಕರು ಹತ್ತಿರದ ಲಸಿಕಾ ಸತ್ರಗಳಿಗೆ ಭೇಟಿ ನೀಡಿ ಲಸಿಕೆಗಳನ್ನು ಪಡೆಯುವಂತೆ ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಿ ಎಂದು ಅವರು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.
ಲಸಿಕಾ ಕಾರ್ಯಕ್ರಮದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡು ಸ್ಥಳೀಯ ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಿ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಲಕನಂದ ಡಿ. ಮಳಗಿ ಮಾತನಾಡಿ, ಲಸಿಕಾ ಕಾರ್ಯಕ್ರಮದ ಉದ್ದೇಶ, ಅನುಷ್ಠಾನ ಪ್ರಕ್ರಿಯೆ, ನಿಗದಿತ ಗುರಿ ಸೇರಿದಂತೆ ಲಸಿಕಾ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಮಹೇಶ ಎಂ.ಜಿ., ಡಿಎಲ್‌ಒ ಡಾ. ಬಿ.ಕೆ.ದೇಸಾಯಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ ಎಚ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker