Karnataka
ಹೊಸಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 20 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿಯಲ್ಲಿ ಇಂದು “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ರಾಜ್ಯ ಮಟ್ಟದ ವಿನೂತನ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಹೊಸಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆ ವೈದ್ಯರು ಸಚಿವರ, ಶಾಸಕರ ಆರೋಗ್ಯ ತಪಾಸಣೆ ಮಾಡಿದರು.